fbpx
ಸಮಾಚಾರ

3 ವರ್ಷಗಳಿಂದ ವಿದ್ಯುತ್ ಇಲ್ಲದೆ ಕಗ್ಗತ್ತಲಲ್ಲೇ ಜೀವನ ನಡೆಸುತ್ತಿದ್ದ ವೃದ್ಧ ದಂಪತಿ ಮನೆಗೆ ಬೆಳಕಾದ ಕಿಚ್ಚ

ಕೇವಲ ಚಿತ್ರಗಳ ಮೂಲಕ ಮಾತ್ರವಲ್ಲದೆ ಅನೇಕ ಸಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿರುವವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್… ಸುತ್ತಮುತ್ತಲಿನ ಜನರ ಬಗ್ಗೆ ಅಪಾರ ಕಾಳಜಿ ಕಳಕಳಿ ಹೊಂದಿರುವ ಸುದೀಪ್ ಚಿತ್ರರಂಗದ ಒಳಗೂ ಹೊರಗೂ ತಮ್ಮ ಕೈನಲ್ಲಾದಷ್ಟು ಸೇವೆಯನ್ನು ಮಾಡಿದ್ದಾರೆ. ಈಗ ಕಿಚ್ಚನ ಸತ್ಕಾರ್ಯವೊಂದು ಎಲ್ಲೆಡೆ ವೈರಲ್ ಆಗುತ್ತಿದೆ.. ಏನದು ಅಂತೀರಾ ಮುಂದೆ ಓದಿ

ಕೆಲ ವರ್ಷಗಳಿಂದ ಬೆಳಕಿಲ್ಲದ ಮನೆಗೆ ಸುದೀಪ್ ಬೆಳಕಾಗುವ ಮೂಲಕ ಸಹಾಯದ ಹಸ್ತ ಚಾಚಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ, ಸಿದ್ದಾಪುರ ಎಂಬ ಗ್ರಾಮದ ಎರಡು ಹಿರಿಯ ಜೀವಗಳಾದ ನಾಗರಾಜು ರಾಧಮ್ಮ ಮೂರು ವರ್ಷದ ಹಿಂದೆ ಮನೆ ಕಟ್ಟಿದ್ದರು. ಆದರೆ ಅದಕ್ಕೆ ವಿದ್ಯುತ್ ಸಂಪರ್ಕ ಮಾಡಿಕೊಳ್ಳಲಾಗದೆ ಅಂದಿನಿಂದ ಅಂದರೆ ಸುಮಾರು ಮೂರು ವರ್ಷದಿಂದ ಕತ್ತಲಲ್ಲಿಯೇ ಜೀವನ ಸಾಗಿಸುತ್ತಿದ್ದರು. ಈ ವಿಷಯ ತಿಳಿದ ಸುದೀಪ್ ಚಾರಿಟಬಲ್ ಸೊಸೈಟಿ.. ‘ಮೊದಲು ಮಾನವನಾಗು’ ಎಂಬ ಘೋಷವಾಕ್ಯದಡಿ ಈ ಕುಟುಂಬಕ್ಕೆ ಬೆಳಕಾಗಿದೆ.

 

 

ವೃದ್ಧ ದಂಪತಿ ತಮ್ಮ ವಿಕಲಾಂಗ ಮೊಮ್ಮಗನೊಂದಿಗೆ ವಾಸಿಸುತ್ತಿದ್ದಾರೆ. ಟ್ರಸ್ಟ್ ಮೂಲಕ ಸುದೀಪ್ ಸಹಾಯ ಮಾಡಿದ್ದಕ್ಕೆ ಕಿಚ್ಚನಿಗೆ ಮತ್ತು ಟ್ರಸ್ಟ್ ಯುವಕರಿಗೆ ವೃದ್ಧ ದಂಪತಿ ಕೈಮುಗಿದು ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳು ವೃದ್ಧ ದಂಪತಿಗೆ ಸಹಾಯ ಮಾಡಿರುವ ವಿಡಿಯೋವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದು, ಸುದೀಪ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

 

 

 

ಅಂದಹಾಗೆ ಲಾಕ್ ಡೌನ್ ಸಂದರ್ಭದಿಂದಲೂ ಕಿಚ್ಚ ಸುದೀಪ್ ಒಂದಿಲ್ಲೊಂದು ಮಾದರಿ ಕೆಲಸ ಮಾಡಿಕೊಂಡೇ ಬಂದಿದ್ದಾರೆ. ಕಷ್ಟದಲ್ಲಿರುವ ಅದೆಷ್ಟೊ ಕುಟುಂಬಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದಾರೆ. ಕಷ್ಟ ಅಂತ ಬಂದವರನ್ನು ಕಿಚ್ಚ ಯಾವತ್ತು ಬರಿಗೈಯಲ್ಲಿ ವಾಪಸ್ ಕಳುಹಿಸಿಲ್ಲ. ಸರ್ಕಾರದ ನಿಯಮವನ್ನು ಉಲ್ಲಂಘಿಸದಂತೆ ಸುದೀಪ್ ನೀಡಿದ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಕಿಚ್ಚನ ಅಭಿಮಾನಿಗಳು ತಮ್ಮ ಕೈಲಾದ ಸೇವೆಯನ್ನು ಮಾಡುತ್ತಿದ್ದಾರೆ. ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಜನರಿಗೆ ಅಗತ್ಯ ವಸ್ತುಗಳು, ದಿನಸಿ, ಆಹಾರವನ್ನು ವಿತರಣೆ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top