fbpx
ಸಮಾಚಾರ

ಅಯೋಧ್ಯೆಯಲ್ಲಿ ರಾಮ ಮಂದಿರ ಬಳಿ ಕರ್ನಾಟಕ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಚಿಂತನೆ

ಅಯೋಧ್ಯೆಲ್ಲಿ ರಾಮ ಮಂದಿರಕ್ಕೆ ನೆನ್ನೆ ಭೂಮಿ ಪೂಜೆ ಕಾರ್ಯಕ್ರಮ ನಡೆದಿದೆ. ಆದ್ರೆ, ಮತ್ತೊಂದೆಡೆ ಕರ್ನಾಟಕ ಸರ್ಕಾರ ಆಗಲೇ ಅಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಯೋಜನೆ ರೂಪಿಸುತ್ತಿದೆ.

ಅಯೋಧ್ಯೆಯ ಶ್ರೀರಾಮ ಮಂದಿರದ ಹತ್ತಿರವೇ ಕರ್ನಾಟಕದ ಯಾತ್ರಿ ನಿವಾಸ ನಿರ್ಮಿಸಲು ಉತ್ತರ ಪ್ರದೇಶದ ಆದಿತ್ಯನಾಥ್​ ಬಳಿ ಸೈಟ್ ಕೋರಲು, ರಾಜ್ಯ ಸರ್ಕಾರ ಮುಂದಾಗಿದೆ. ಉತ್ತರ ಪ್ರದೇಶ ಸರ್ಕಾರದಿಂದ ನಿವೇಶನ ಕೋರುವಂತೆ ಸಿಎಂ ಯಡಿಯೂರಪ್ಪಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪತ್ರ ಬರೆದಿದ್ದಾರೆ.

 

 

“ಅಯೋಧ್ಯೆಯು ಭವಿಷ್ಯದಲ್ಲಿ ಕೋಟ್ಯಾಂತರ ಹಿಂದೂಗಳಿಗೆ ತಿರುಮಲ ತಿರುಪತಿ ಮಾದರಿಯಲ್ಲಿ ಅತ್ಯಂತ ಪವಿತ್ರ ಯಾತ್ರಾ ಸ್ಥಳವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಾ ಭವನದ ಅಗತ್ಯತೆ ಕಂಡುಬರುತ್ತದೆ. ಆದ್ದರಿಂದ ಅಯೋಧ್ಯೆಯ ರಾಮ ಮಂದಿರದ ಆಸುಪಾಸಿನಲ್ಲಿ ಕರ್ನಾಟಕ
ನಿರ್ಮಾಣದ ಉದ್ದೇಶಕ್ಕಾಗಿ ಕನಿಷ್ಠ 3 ರಿಂದ 5 ಎಕರೆ ಭೂಮಿಯನ್ನು ಕರ್ನಾಟಕ ಭವನ ನಿರ್ಮಾಣಕ್ಕೆ ನೀಡಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಆಯೋಧ್ಯಾ ನಗರದಲ್ಲಿ ಕರ್ನಾಟಕ ಭವನ ನಿರ್ಮಾಣ ಮಾಡುವ ಪ್ರಸ್ತಾವನೆ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದೇನೆ. ಕರ್ನಾಟಕದ ಯಾತ್ರಾರ್ಥಿಗಳು ರಾಮಮಂದಿರಕ್ಕೆ ತೆರಳುವ ಸಂದರ್ಭ ಈ ಭವನ ಉಪಯೋಗಕ್ಕೆ ಬರಬೇಕಿದೆ. ಅಯೋಧ್ಯೆ ನಗರದಲ್ಲಿ 5 ಎಕರೆ ಜಮೀನನ್ನು ಕರ್ನಾಟಕಕ್ಕೆ ಕೊಡಬೇಕು ಅಂತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ ಭಿನ್ನಹ ಮಾಡಿಕೊಳ್ಳುತ್ತಿದ್ದೇನೆ” ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top