fbpx
ಸಮಾಚಾರ

“ಮಂದಿರ/ಮಸೀದಿ ಇಲ್ಲದಿದ್ದರೂ ಪೂಜೆ ಮಾಡಬಹುದು, ದೇವರು ನಮ್ಮ ಒಳಗಡೆಯೇ ಇದ್ದಾನೆ” ರಮ್ಯಾ

ಕನ್ನಡ ಚಿತ್ರರಂಗದಲ್ಲಿ ಮೋಹಕ ತಾರೆ, ಸ್ಯಾಂಡಲ್ ವುಡ್ ಕ್ವೀನ್ ಅಂತಲೇ ಕರೆಸಿಕೊಂಡು ಬೇಡಿಕೆ ಇರುವಾಗಲೇ ರಾಜಕಾರಣದಲ್ಲಿ ಕಳೆದು ಹೋದವರು ನಟಿ ರಮ್ಯಾ. ಆದರೆ ಖುದ್ದು ಕಾಂಗ್ರೆಸ್ ಕಾರ್ಯಕರ್ತರಿಗೇ ಆಕೆಯ ರಾಜಕೀಯ ನಡೆ ಏನು ಎಂಬುದರ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣಗಳಿಲ್ಲ.. ಆ ವಿಷ್ಯ ಹಾಗಿರಲಿ, ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೇ ರಮ್ಯಾ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

 

ದೇವರನ್ನು ಪೂಜೆ ಮಾಡಲು ಮಂದಿರ ಅಥವಾ ಮಸೀದಿಯ ಅಗತ್ಯವಿಲ್ಲ ಎಂದು ಜನ ಅರ್ಥ ಮಾಡಿಕೊಂಡರೆ ನಾನು ಅತ್ಯಂತ ಸಂತೋಷಪಡುತ್ತೇನೆ ಎಂದು ಫೇಸ್ಬುಕ್ ನಲ್ಲಿ ರಮ್ಯಾ ಬರೆದುಕೊಂಡಿದ್ದಾರೆ.

 

Don't be a victim to politics. Don't succumb to the identity crisis it creates for power and control. Question, look through it & rise above.

Divya Spandana/Ramya ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಗುರುವಾರ, ಆಗಸ್ಟ್ 6, 2020

 

ಹಿಂದೂಗಳು ಸಂತೋಷದಿಂದ ರಾಮ ಮಂದಿರ ನಿರ್ಮಾಣ ಮಾಡಲು ಮುಂದಾಗುತ್ತಿರುವುದನ್ನು ಕಂಡು ನನಗೆ ಸಂತಸವಿದೆ. ಮುಸ್ಲಿಮರು ಸಂತೋಷದಿಂದ ಮಸೀದಿ ನಿರ್ಮಾಣಕ್ಕೆ ಮುಂದಾಗಿರುವುದನ್ನು ನೋಡಿ ನನಗೆ ಸಂತಸವಿದೆ. ಆದರೆ ಇಬ್ಬರೂ ಸಂತೋಷವಾಗಿರಲು ಅಥವಾ ದೇವರನ್ನು ಅರಿತುಕೊಳ್ಳಲು ದೇವಾಲಯ ಅಥವಾ ಮಸೀದಿ ಅಗತ್ಯವಿಲ್ಲ ಎಂದು ಅವರಿಗೆ ತಿಳಿದಾಗ ನನಗೆ ಹೆಚ್ಚು ಸಂತೋಷವಾಗುತ್ತದೆ. ನಿಜವಾದ ಸಂತೋಷ ಏಕತೆ/ ಒಗ್ಗಟ್ಟಿನಲ್ಲಿದೆ. ಹೊರಗಡೆ ದೇವರಿಲ್ಲ. ದೇವರು ನಮ್ಮ ಒಳಗಡೆಯೇ ಇದ್ದಾನೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top