fbpx
ಸಮಾಚಾರ

“ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ” ಯುಪಿ ಸಿಎಂ ಯೋಗಿಗೆ ಯಡಿಯೂರಪ್ಪ ಪತ್ರ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಾಣಕ್ಕೆ 2 ಎಕರೆ ಜಮೀನು ಮಂಜೂರು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತರ ಪ್ರದೇಶ ಸರಕಾರಕ್ಕೆ ಮನವಿ ಮಾಡಿದ್ದಾರೆ.

 

 

ಈ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದಿರುವ ಸಿಎಂ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಯಶಸ್ವಿಯಾಗಿ ಭೂಮಿ ಪೂಜೆ ನೆರವೇರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯದಿಂದ ಅಯೋಧ್ಯೆಗೆ ಸಾವಿರಾರು ಜನರು ಭೇಟಿ ನೀಡುತ್ತಾರೆ. ಹಾಗಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 2 ಎಕರೆ ಭೂಮಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಿಂದ ಅಯೋಧ್ಯೆಗೆ ಭಕ್ತರು ಭೇಟಿ ನೀಡುತ್ತಾರೆ. ಅವರಿಗಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಬೇಕಾಗಿದೆ. ಈ ಉದ್ದೇಶದಿಂದ ಕರ್ನಾಟಕಕ್ಕೆ ಉತ್ತರಪ್ರದೇಶ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು ಸಿಎಂ ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top