fbpx
ಸಮಾಚಾರ

“ಸಾರ್ವಜನಿಕವಾಗಿ ಗಣೇಶೋತ್ಸವ ಮಾಡೇ ಮಾಡುತ್ತೇವೆ, ತಾಕತ್ತಿದ್ದವರು ಬಂಧಿಸಲಿ ನೋಡೋಣ” ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಓಪನ್ ಚಾಲೆಂಜ್

ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಕ್ಕೆ ಓಪನ್ ಚಾಲೆಂಜ್ ಅನ್ನೇ ಹಾಕಿದರು.

ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಸರಕಾರ ಈವರೆಗೆ ಅವಕಾಶ‌ ನೀಡಿಲ್ಲ. ಆದರೆ, ಕೊವಿಡ್ ನಿಯಮಗಳ ಪ್ರಕಾರವೇ ಆಚರಣೆಗೆ ಅವಕಾಶ ನೀಡಬೇಕು. ಮಾಲ್ ಮತ್ತು ಬಾರ್ ಹಾಗೂ ಹೋಟೇಲುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಸಾರ್ವಜನಿಕ‌ ಗಣೇಶ ಉತ್ಸವ ಆಚರಣೆ ಕುರಿತು‌ ಸರಕಾರ ಈ ಕೂಡಲೇ ಹೇಳಿಕೆ ಬಿಡುಗಡೆ ಮಾಡಬೇಕು. ಸಾರ್ವಜನಿಕ ದೇವಸ್ಥಾನಗಳನ್ನು ಓಪನ್ ಮಾಡಲು ಅವಕಾಶ ನೀಡಲಾಗಿದೆ. ಆದರೆ, ಸಾರ್ವಜನಿಕ ಗಣೇಶ ಉತ್ಸವಕ್ಕೆ ಯಾಕೆ ವಿರೋಧ ಮಾಡುತ್ತಿದ್ದೀರಿ?

ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಿದರೆ ನಾವು ತೀರ್ಥ ಕೊಡುವುದಿಲ್ಲ. ಪ್ರಸಾದ ವಿತರಿಸುವುದಿಲ್ಲ. ಭಜನೆಯನ್ನೂ‌ ಮಾಡುವುದಿಲ್ಲ. ನಿಯಮದ ಪ್ರಕಾರವೇ ಸಾರ್ವಜನಿಕವಾಗಿ ಗಣೇಶ ಉತ್ಸವ ಆಚರಣೆ ಮಾಡುತ್ತೇವೆ. ಮಹಾರಾಷ್ಟ್ರ ಮಾದರಿಯಲ್ಲಿ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅವಕಾಶ ನೀಡಬೇಕು. ಒಂದು ವೇಳೆ ಅವಕಾಶ ನೀಡದಿದ್ದರೆ ಆಚರಣೆ ನಿಲ್ಲಿಸುವುದಿಲ್ಲ. ಬೇಕಿದ್ದರೆ ಬಂಧಿಸಿ ಎಂದು ಅವರು ಸವಾಲು ಹಾಕಿದರು.

ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ ಎನ್ನುವ ಮೂಲಕ ಸರ್ಕಾರದ ಆದೇಶಕ್ಕೆ ಸೆಡ್ಡುಹೊಡೆದ ಪ್ರಮೋದ್​ ಮುತಾಲಿಕ್​, ಕರೊನಾ ನಿರ್ವಹಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಾವು-ನೋವಿನಲ್ಲೂ ದುಡ್ಡು ಹೊಡೆಯಲಾಗುತ್ತಿದೆ. ವಿರೋಧ ಪಕ್ಷದವರು ಆರೋಪಿಸಿದ್ದು ಸರಿಯಾಗಿದೆ, ಸರ್ಕಾರ ಅವರಿಗೆ ಸಮರ್ಪಕ ದಾಖಲೆ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top