fbpx
ಸಮಾಚಾರ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಕಳೆದ ವರ್ಷ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಶೇ.73.70ರಷ್ಟು ಫಲಿತಾಂಶ ಬಂದಿತ್ತು. ಆದರೆ, ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಹೆದರಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಿರಲಿಲ್ಲ. ಅಲ್ಲದೆ, ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಪರಿಣಾಮ ಈ ವರ್ಷದ ಫಲಿತಾಂಶ ಶೇ.71.80ರಷ್ಟು ಬಂದಿದೆ.

ಈ ಬಾರಿ ಚಿಕ್ಕಬಳ್ಳಾಪುರ ಮೊದಲನೇ ಸ್ಥಾನ ಪಡೆದಿದ್ದು, ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರನೇ ಸ್ಥಾನ ಪಡೆದಿದ್ದರೆ, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ ಹಾಗೂ ಚಿತ್ರದುರ್ಗ ಐದನೇ ಸ್ಥಾನದಲ್ಲಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉಡುಪಿ 7, ಮಂಗಳೂರು 12, ಶಿರಸಿಗೆ 15ನೇ ಸ್ಥಾನ ಪ್ರಾಪ್ತಿಯಾಗಿದೆ.

ಪರೀಕ್ಷಾ ಫಲಿತಾಂಶ ನೋಡೋದು ಹೇಗೆ?:
ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್‌ಸೈಟ್ http://kseeb.kar.nic.in/ ಅಥವಾ http://karresults.nic.in./ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಮೂಡುವ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
ಸ್ಟೆಪ್ 3: ಆ ನೋಟಿಫಿಕೇಶನ್‌ನಲ್ಲಿ ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ 2020ರ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೇಳಿರುವ ಜಾಗದಲ್ಲಿ ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕ ಹಾಗೂ ಇನ್ನಿತರೆ ಕೇಳಲಾಗಿರುವ ಮಾಹಿತಿಗಳನ್ನು ನಮೂದಿಸಿ ಸ್ಟೆಪ್ 5: ನಂತರ Submit Button ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ರಿಸಲ್ಟ್ ಪ್ರತಿಯನ್ನು ಪ್ರಿಂಟೌಟ್ ತೆಗೆದುಕೊಳ್ಳಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top