fbpx
ಸಮಾಚಾರ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ: ಮಿದುಳು ಶಸ್ತ್ರಚಿಕಿತ್ಸೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಬೆಳಗ್ಗೆ ತಮಗೆ ಕೊರೋನಾ ಸೋಂಕು ಇರುವುದಾಗಿ ಸ್ವತಃ ಟ್ವಿಟರ್‌ ಮೂಲಕ ಬಹಿರಂಗಪಡಿಸಿದ್ದರು, ಇದರ ಬೆನ್ನಲ್ಲೇ ಮುಖರ್ಜಿಯವರಿಗೆ ಮೆದುಳಿನ ಸರ್ಜರಿ ನಡೆದಿದ್ದು, ಅವರ ಪರಿಸ್ಥಿತಿ ಗಂಭೀರ ವಾಗಿದೆ ಎನ್ನಲಾಗಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೆಹಲಿಯಲ್ಲಿ ಸೇನೆಯ ರಿಸರ್ಚ್ ಆ್ಯಂಡ್ ರೆಫೆರಲ್ ಆಸ್ಪತ್ರೆಯಲ್ಲಿ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಸಹಕಾರ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

 

 

84 ವರ್ಷದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತ ತೆಗೆಯಲು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆಗೂ ಮುನ್ನ ನಡೆಸಲಾದ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಬಗ್ಗೆ ಪ್ರಣಬ್ ಮುಖರ್ಜಿ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top