fbpx
ಸಮಾಚಾರ

ಕಿಚ್ಚ ಸುದೀಪ್‌ ಮಾಡಿದ ಈ ಸತ್ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

ಕಿಚ್ಚ ಸುದೀಪ್ ಅವರು ಸಿನಿಮಾಗಳ ಹೊರತಾಗಿ ಸಮಾಜಮುಖಿ ಕಾರ್ಯಗಳನ್ನು ಮಾಡುವುದರಲ್ಲಿಯೂ ಹೆಸರಾದವರು. ಸಿನಿಮಾ ಕ್ಷೇತ್ರದ ನಟರು ಸೇರಿದಂತೆ ತಂತ್ರಜ್ಞರು ಸಂಕಷ್ಟದಲ್ಲಿದ್ದಾಗ ಅವರ ನೆರವಿಗೆ ಧಾವಿಸೋ ಕಿಚ್ಚ, ಅಭಿಮಾನಿಗಳು ಕಷ್ಟದಲ್ಲಿದ್ದಾಗಲೂ ಅವರ ಸಹಾಯಕ್ಕೆ ಬಂದು ನಿಲ್ಲುತ್ತಾರೆ.

ಇತ್ತೀಚೆಗಷ್ಟೇ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡು ಸುದ್ದಿಯಾಗಿದ್ದ ನಟ ಸುದೀಪ್ ಅವರು ಇದೀಗ ಇನ್ನೂ ನಾಲ್ಕು ಶಾಲೆಗಳನ್ನು ದತ್ತು ಪಡೆಯುವ ಮೂಲಕ ಸಮಾಜಮುಖಿ ಕೆಲಸಕ್ಕೆ ಮುಂದಾಗಿದ್ದಾರೆ.​ ಈ ಮೂಲಕ ಸರ್ಕಾರೀ ಶಾಲೆಗಳ ಜೀರ್ಣೋದ್ದಾರ ಮಾಡಲು ಮುಂದಾಗಿದ್ದಾರೆ. ಕಿಚ್ಚನ ಈ ಕಾರ್ಯವನ್ನು ಸಚಿವ ಶ್ರೀ ರಾಮುಲು ಅವರು ಹಾಡಿ ಹೊಗಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಸಚಿವ ಶ್ರೀ ರಾಮುಲು ಅವರು ಕಿಚ್ಚನನ್ನು ಶ್ಲಾಘಿಸಿದ್ದಾರೆ. “ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಮಾದರಿ ನಡೆಗಾಗಿ ಜನಪ್ರಿಯ ಚಲನಚಿತ್ರ ನಟ ಶ್ರೀ ಕಿಚ್ಚ ಸುದೀಪ್ ಅವರನ್ನು ಸಾರ್ವಜನಿಕರ ಪರವಾಗಿ ಅಭಿನಂದಿಸುತ್ತೇನೆ.” ಎಂದು ಸುಧಾಕರ್ ಟ್ವೀಟ್ ಮಾಡುವ ಮೂಲಕ ಸುದೀಪ್ ರನ್ನು ಶ್ಲಾಘಿಸಿದ್ದಾರೆ.

 

 

ಸರ್ಕಾರೀ ಶಾಲೆಗಳ ಅಭಿವೃದ್ಧಿಗೆ ಪಣ ತೊಟ್ಟಿರುವ ಸುದೀಪ್ ಅವ್ರು ತಮ್ಮ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಟ್ರಸ್ಟ್ ಮೂಲಕ ದತ್ತು ಪಡೆದಿದ್ದಾರೆ. ಆವಿಗೆ ಹಳ್ಳಿ, ಹಾಳಸಸಿ, ಎಸ್​.ಎನ್​ ಬಡಾವಣೆ ಸಾಗರ, ಎಲ್​.ಎಲ್​ ಹಳ್ಳಿ ಸಾಗರ ಸೇರಿ ಒಟ್ಟು 4 ಕನ್ನಡ ಶಾಲೆಗಳನ್ನು ದತ್ತು ಪಡೆಯಲಾಗಿದೆ.

 

 

ಸರ್ಕಾರಿ ಶಾಲಾ ಶಿಕ್ಷಕರ ಸಂಬಳ ಹಾಗೂ ಮಕ್ಕಳ ಸ್ಕಾಲರ್​ಶಿಪ್ ಬಿಟ್ಟು ಶಾಲೆ ಅಭಿವೃದ್ಧಿಯ ಜವಾಬ್ದಾರಿಯನ್ನು ಕಿಚ್ಚ ವಹಿಸಿಕೊಂಡಿದ್ದು, ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣ ಕೆಲಸ. ಪೇಂಟಿಂಗ್​, ಶೌಚಾಲಯ ನಿರ್ಮಾಣ ಸೇರಿ ಶಾಲೆಗೆ ಬೇಕಾದ ಮೂಲ ಸೌಕರ್ಯವನ್ನು ಕಿಚ್ಚ ತಮ್ಮ ಟ್ರಸ್ಟ್​ ಮೂಲಕ ಒದಗಿಸಲಿದ್ದಾರೆ.

ಅಂದಹಾಗೆ ಲಾಕ್ ಡೌನ್ ಸಂದರ್ಭದಲ್ಲಿ ಕಿಚ್ಚ ಸುದೀಪ್ ಒಂದಿಲ್ಲೊಂದು ಮಾದರಿ ಕೆಲಸ ಮಾಡಿಕೊಂಡೇ ಬಂದಿದ್ದಾರೆ. ಕಷ್ಟದಲ್ಲಿರುವ ಅದೆಷ್ಟೊ ಕುಟುಂಬಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದಾರೆ. ಕಷ್ಟ ಅಂತ ಬಂದವರನ್ನು ಕಿಚ್ಚ ಯಾವತ್ತು ಬರಿಗೈಯಲ್ಲಿ ವಾಪಸ್ ಕಳುಹಿಸಿಲ್ಲ. ಸರ್ಕಾರದ ನಿಯಮವನ್ನು ಉಲ್ಲಂಘಿಸದಂತೆ ಸುದೀಪ್ ನೀಡಿದ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಕಿಚ್ಚನ ಅಭಿಮಾನಿಗಳು ತಮ್ಮ ಕೈಲಾದ ಸೇವೆಯನ್ನು ಮಾಡುತ್ತಿದ್ದಾರೆ. ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಜನರಿಗೆ ಅಗತ್ಯ ವಸ್ತುಗಳು, ದಿನಸಿ,

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top