fbpx
ಸಮಾಚಾರ

ಕೊರೋನಾದಿಂದ ಗುಣಮುಖ- ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹಾಗಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಆಗಸ್ಟ್‌ 3 ರಂದು ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆಯ ವೇಳೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು ಇದೀಗ ಆರೋಗ್ಯದಲ್ಲಿದ್ದಾರೆ.

ಕೋವಿಡ್‌ ಪಾಸಿಟಿವ್‌ ಆದರೂ ಅವರಿಗೆ ಕೊರೊನಾ ರೋಗ ಲಕ್ಷಣಗಳು ಕಂಡುಬಂದಿಲ್ಲ. ಹೀಗಿದ್ದರೂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಹಾಗೂ ವೈದ್ಯಕೀಯ ನಿಗಾದಲ್ಲಿ ಇಡಲಾಗಿದೆ. ಇದೀಗ ಅವರು ಸಂಪೂರ್ಣ ಚೇತರಿಸಿಕೊಂಡಿದ್ದಾರೆ.

ಆಸ್ಪತ್ರೆಯಿಂದ ಹೊರಡುವ ಮುನ್ನ ಸಿಬ್ಬಂದಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ ಇದೇ ವೇಳೆ ಆಸ್ಪತ್ರೆ ಸಿಬ್ಬಂದಿ ಸಹ ಸಿದ್ದರಾಮಯ್ಯನವರಿಗೆ ಹೀ ಗುಚ್ಚ ನೀಡಿ ಬೀಳ್ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರಗೂ ನೆಗೆಟಿವ್ ವರದಿ ಬಂದ ಹಿನ್ನೆಲೆ ಅವರೂ ಸಹ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಂದೆಯನ್ನು ಕರೆದುಕೊಂಡು ಮನೆಗೆ ಆಗಮಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top