fbpx
ಸಮಾಚಾರ

“ಶಾಸಕ ಜಮೀರ್ ಅಹ್ಮದ್ ಒಬ್ಬ ರಾಷ್ಟ್ರದ್ರೋಹಿ”

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿನ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ನಡೆ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕ ಜಮೀರ್ ಅಹ್ಮದ್ ಒಬ್ಬ ರಾಷ್ಟ್ರದ್ರೋಹಿ ಎಂದು ಟೀಕಿಸಿದರು.

ಶಿವಮೊಗ್ಗದ ತಮ್ಮ ಕಚೇರಿಯಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಡಿಕೆಶಿ ಮತ್ತು ಸಿದ್ದರಾಮಯ್ಯ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ನಿಮ್ಮ ಇಂತಹ ಕೆಟ್ಟ ರಾಜಕಾರಣದಿಂದಲೇ ದೇಶದಲ್ಲಿ ಕಾಂಗ್ರೆಸ್ ಎಲ್ಲಿದೇ ಅಂತ ಭೂತಗನ್ನಡಿ ಹಾಕಿ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಮೌಲ್ಯಯುತ ರಾಜಕಾರಣ ಮಾಡಿ ಎಂದು ತಿಳಿಸಿದ್ದಾರೆ.

ಹಿಂದಿನ ಕಾಂಗ್ರೆಸ್ ರಾಷ್ಟ್ರಕ್ಕಾಗಿ, ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿತ್ತು. ಆಗಾಗಿ ಈ ಹಿಂದಿನ ಕಾಂಗ್ರೆಸ್ಸೇ ಬೇರೆ. ಇಂದಿನ ಕಾಂಗ್ರೆಸ್ಸೇ ಬೇರೆ. ಇವರು ಕುರ್ಚಿಗಾಗಿ ಹೋರಾಟ ಮಾಡುತ್ತಿದ್ದಾರೆ.

“ಜಮೀರ್ ಅಹಮದ್ ಅವನೊಬ್ಬ ರಾಷ್ಟ್ರದ್ರೋಹಿ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಇಂತಹ ಗಲಭೆಗಳು ನಡೆದಾಗ ಕೆಲವರು ಮುಸಲ್ಮಾನರ ಲೀಡರ್ ಆಗಲು ಓಡಾಡುತ್ತಾರೆ. ಇದರಲ್ಲಿ ಆತನು ಒಬ್ಬ. ಮುಸಲ್ಮಾನರ ಲೀಡರ್ ಆಗಲು ಜಮೀರ್ ಈ ರೀತಿ ಮಾಡುತ್ತಿದ್ದಾನೆ. ಕೋಮುಗಲಭೆ ಗಲಭೆಯಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದವರು ಅಮಾಯಕರು ಎಂದು ಹೇಳಿಕೆ ನೀಡುತ್ತಿದ್ದಾನೆ. ” ಎಂದು ಈಶ್ವರಪ್ಪ ಹೇಳಿದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top