fbpx
ಸಮಾಚಾರ

ರಾಯಣ್ಣನ ಹುಟ್ಟಿದ ದಿನವೇ ರಾಯಣ್ಣನ ಪ್ರತಿಮೆ ತೆರವುಗೊಳಿಸಿದ ಕರ್ನಾಟಕ ಪೊಲೀಸರು

ನೆನ್ನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನ. ಆದರೆ ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿಕಾರಿ ಪುರುಷನ ಪ್ರತಿಮೆಯನ್ನೇ ಬೆಳಗಿನ ಜಾವ ತೆರವುಗೊಳಿಸಿರುವ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ.

ಸ್ಥಳೀಯರು ಪೀರನವಾಡಿ ಗ್ರಾಮದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು. ಆದರೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಇಂದು ಬೆಳಗಿನ ಜಾವ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ಪೊಲೀಸರ ಕ್ರಮ ಖಂಡಿಸಿ ವಿವಿಧ ಕನ್ನಡಪರ ಸಂಘಟ‌ನೆಗಳು ಬೃಹತ್ ಪ್ರತಿಭಟನೆಗೆ ಮುಂದಾದರು. ಈ ವೇಳೆ ಓಡುವಾಗ ಬಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ. ಪೂರ್ವ ಮಾಹಿತಿ ಇದ್ದಿದ್ದರಿಂದಾಗಿ ಸ್ಥಳದಲ್ಲಿ ಶುಕ್ರವಾರ ರಾತ್ರಿಯಿಂದಲೇ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top