fbpx
ಸಮಾಚಾರ

ಭಾರತದಲ್ಲಿ 50 ಸಾವಿರದ ಗಡಿ ದಾಟಿದ ಕೊರೊನಾಗೆ ಬಲಿಯಾದವರ ಸಂಖ್ಯೆ

ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು ಕಳೆದ 24 ಗಂಟೆಗಳಲ್ಲಿ ದಾಖಲೆಯ 57,982 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 26,47,664ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಕೊರೋನಾ ವೈರಸ್’ಗೆ 941 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 50,921ಕ್ಕೆ ತಲುಪಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದೇ ವೇಳೆ 26,47,664 ಮಂದಿ ಸೋಂಕಿತರ ಪೈಕಿ ದೇಶದಲ್ಲಿ 19,19,843 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಗುಣಮುಖರಾದವರ ಸಂಖ್ಯೆ 20 ಲಕ್ಷ ಗಡಿಯತ್ತ ಸಾಗುತ್ತಿದೆ. ದೇಶದಲ್ಲಿನ್ನೂ 6,76,900 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ವಿಶ್ವದಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು ಬ್ರೆಜಿಲ್ ಮೊದಲ ಎರಡು ಸ್ಥಾನಗಳಲ್ಲಿವೆ. ರಷ್ಯಾ, ಸೌಥ್ ಅಫ್ರಿಕಾ ಮತ್ತು ಪೆರು ಕ್ರಮವಾಗಿ 4,5 ಮತ್ತು 6ನೇ ಸ್ಥಾನಗಳಲ್ಲಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top