fbpx
ಸಮಾಚಾರ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವಂತಿಲ್ಲ, ಆಚರಿಸಿದರೆ ಕಾನೂನು ಕ್ರಮ: ಸರ್ಕಾರದ ಮಾರ್ಗಸೂಚಿ

ಗಣಪತಿ ಹಬ್ಬ ಆಚರಣೆಗೆ ಸರಕಾರದಿಂದ ಕೊನೆಗೂ ಮಾರ್ಗಸೂಚಿ ಹೊರಬಿದ್ದಿದೆ. ಕೇವಲ ಒಂದು ವಾರ ಇದ್ದಾಗ ಸರಕಾರ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಸಾರ್ವಜನಿಕ ಗಣಪತಿ ಉತ್ಸವ ಆಚರಣೆ ಮಾಡುವವರನ್ನು ಪೇಚಿಗೆ ಸಿಲುಕಿಸಿದೆ.

ಸಾರ್ವಜನಿಕ ಗಣೇಶೋತ್ಸವ ನಡೆಸುವಂತಿಲ್ಲ‌. ಯಾವುದೇ ಧಾರ್ಮಿಕ ಆಚರಣೆಗೂ ಕೇಂದ್ರ ಸರ್ಕಾರ ಅನುಮತಿ‌ ನೀಡಿಲ್ಲ. ಈ ಹಿನ್ನಲೆಯಲ್ಲಿ ಇತ್ತ ರಾಜ್ಯ ಸರ್ಕಾರವು ಸಹ ಕೇಂದ್ರದ ಮಾರ್ಗಸೂಚಿ ಪಾಲಿಸುವಂತೆ ಆದೇಶ ಹೊರಡಿಸಿದೆ.

ಮನೆಯಲ್ಲೇ ಅಥವಾ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಆಚರಿಸಬೇಕು. ರಸ್ತೆ, ಗಲ್ಲಿ, ಓಣಿ, ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಯಲ್ಲಿ ಉಲ್ಲೇಖವಾಗಿದೆ.

ಗಣೇಶೋತ್ಸವ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು

1.ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು

2.ಸಾರ್ವಜನಿಕ ಸ್ಥಳಗಳಾದ ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.

3.ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ.

4.ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾ ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ.

5. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡುವುದು.

6. ಮಾರ್ಗಸೂಚಿ ಉಲ್ಲಂಘಿಸಿದವರ ಮೇಲೆ ವಿಪತ್ತಯ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top