fbpx
ಸಮಾಚಾರ

“ಇನ್ಮುಂದೆ ಮಧ್ಯ ಪ್ರದೇಶದ ಉದ್ಯೋಗಗಳು ರಾಜ್ಯದ ಜನರಿಗೆ ಮಾತ್ರ” ಸಿಎಂ ಚೌಹಾಣ್ ಘೋಷಣೆ: ಈ ಕಾನೂನು ಕರ್ನಾಟಕಕ್ಕೆ ಯಾಕಿಲ್ಲ?

ಮಧ್ಯಪ್ರದೇಶದಲ್ಲಿನ ಸರ್ಕಾರಿ ಉದ್ಯೋಗಗಳು ಇನ್ನು ಮುಂದೆ ರಾಜ್ಯದ ಪ್ರಜೆಗಳಿಗೆ ಮಾತ್ರವೇ ಮೀಸಲಾಗಿರಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ. ಸರ್ಕಾರಿ ಉದ್ಯೋಗ ರಾಜ್ಯದ ಜನತೆಗೆ ಮಾತ್ರ ಮೀಸಲಿಡಲಾಗುವುದು. ಈ ಬಗ್ಗೆ ಶೀಘ್ರವೇ ಕಾನೂನು ರೂಪಿಸಲಾಗುವುದು ಎಂದಿದ್ದಾರೆ.

“ಮಧ್ಯಪ್ರದೇಶ ಸರ್ಕಾರ ಇಂದು ಮುಖ್ಯವಾದ ನಿರ್ಧಾರವನ್ನು ಕೈಗೊಂಡಿದೆ. ಮಧ್ಯಪ್ರದೇಶದಲ್ಲಿ ಕೇವಲ ರಾಜ್ಯದ ಯುವಕರಿಗೆ ಮಾತ್ರ ಸರ್ಕಾರಿ ಉದ್ಯೋಗ ನೀಡುವಂತೆ ಬೇಕಾದ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಮಧ್ಯಪ್ರದೇಶದ ಯುವ ಸಂಪನ್ಮೂಲ ಮಧ್ಯಪ್ರದೇಶಕ್ಕೆ ಬಳಕೆಯಾಗಬೇಕು ಎಂದು ಚೌಹಾಣ್ ಬಿಡುಗಡೆ ಮಾಡಿರುವ ವಿಡಿಯೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಭಾಷಣ ಮಾಡುವಾಗಲೂ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳು, ಮಧ್ಯಪ್ರದೇಶದಲ್ಲಿನ ಉದ್ಯೋಗದಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು. ಮಧ್ಯಪ್ರದೇಶ ಸರ್ಕಾರಿ ಉದ್ಯೋಗದಲ್ಲಿ ಯುವಕರಿಗೆ ಆದ್ಯತೆ. ನಮ್ಮ ರಾಜ್ಯದ ಯುವಕರಿಗೆ ಉದ್ಯೋಗ ಮೀಸಲಿಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದ್ದರು.

ಕರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಸಾವಿರಾರು ಮಂದಿ ಉದ್ಯೋಗ ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲಿ ಈ ನಿರ್ಧಾರ ಬಂದಿರುವುದು ರಾಜ್ಯದ ನಿರುದ್ಯೋಗಿಗಳಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಇದೆ ರೀತಿಯ ಕಾನೂನನ್ನು ಕರ್ನಾಟಕದಲ್ಲಿ ಕೂಡ ತರಬೇಕು ಎಂಬ ಕೂಗು ಶುರುವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top