fbpx
ಸಮಾಚಾರ

ಕೊರೊನಾದಿಂದ ಗುಣಮುಖರಾದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಾಖಲು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಗ್ಯದಲ್ಲಿ ಕೊಂಚ ಏರು ಪೇರಾಗಿದ್ದು, ದಿಲ್ಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ. ಕಳೆದ ವಾರವಷ್ಟೇ ಅಮಿತ್‌ ಶಾ ಕೊರೊನಾ ವೈರಸ್‌ನಿಂದ ಗುಣಮುಖರಾಗಿದ್ದರು.

ಕಳೆದ ಮೂರ್ನಾಲ್ಕು ದಿನಗಳಿಂದ ಆಯಾಸ ಹಾಗೂ ದೇಹದ ನೋವಿನಿಂದ ಅಮಿತ್‌ ಶಾ ಬಳಲುತ್ತಿದ್ದರೆಂದು ಏಮ್ಸ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಅಮಿತ್‌ ಶಾ ಅವರಿಗೆ ಆಯಾಸ ಹಾಗೂ ಮೈ-ಕೈ ನೋವಿನಿಂದ ಬಳಲುತ್ತಿದ್ದರು. ಅವರ ಕೊರೊನಾ ವೈರಸ್‌ ಪರೀಕ್ಷೆ ನೆಗೆಟಿವ್‌ ಬಂದಿದೆ. ಕೊರೊನಾ ಆರೈಕೆಗಾಗಿ ಏಮ್ಸ್‌ಗೆ ಅಮಿತ್‌ ಶಾ ದಾಖಲಾಗಿದ್ದಾರೆ. ಅವರು ಉತ್ತಮವಾಗಿದ್ದು, ಆಸ್ಪತ್ರೆಯಿಂದಲೇ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಅಂದಹಾಗೆ ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿತ್ತು. ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top