fbpx
ಸಮಾಚಾರ

ಶಾಸಕ ಜಮೀರ್​ ಅಹ್ಮದ್​ಗೆ ಕೊರೊನಾ ಪಾಸಿಟಿವ್​: ಆಸ್ಪತ್ರೆಗೆ ದಾಖಲು

ಚಾಮರಾಜಪೇಟೆ ಶಾಸಕ ಶಾಸಕ ಜಮೀರ್​ ಅಹ್ಮದ್​ ಖಾನ್​ಗೆ ಕರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರೇ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಹಾಗೇ ತಮ್ಮ ಕೊವಿಡ್​-19 ಟೆಸ್ಟ್​ ರಿಪೋರ್ಟ್​​ನ್ನೂ ಕೂಡ ಪೋಸ್ಟ್​ ಮಾಡಿದ್ದಾರೆ.

 

 

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ ಎಂದು ಶಾಸಕ ಜಮೀರ್​ ಅಹ್ಮದ್​ ಖಾನ್ ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ

ಸದ್ಯ ವೈದ್ಯರ ಸಲಹೆ ಮೇರೆಗೆ ಶಾಸಕ ಜಮೀರ್ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಜಮೀರ್​ ಅಹ್ಮದ್ ಖಾನ್ ಅವರ ಬೆಂಬಲಿಗರು, ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಆತಂಕ ಶುರುವಾಗಿದೆ. ಬೆಂಗಳೂರು ಗಲಭೆಯ ಬಳಿಕ ಜಮೀರ್​ ಹಲವು ಕಡೆ ಓಡಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top