fbpx
ಸಮಾಚಾರ

“ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ”

ರಾಜ್ಯ ಸರ್ಕಾರ ಆಸ್ಪತ್ರೆಗಳಿಗೆ ಅಗತ್ಯ ಪ್ರಮಾಣದಲ್ಲಿ ಆಮ್ಲಜನಕ ಪೂರೈಸುವುದಕ್ಕೆ ಏದುಸಿರು ಬಿಡುತ್ತಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

 

 

ಈ ಕುರಿತಂತೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿರುವ ಎಚ್‍ಡಿಕೆ ಅವರು “ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು.”

 

 

“ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು.”

 

 

“ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.”

 

 

“ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ.”

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top