fbpx
ಸಮಾಚಾರ

ಆರೋಗ್ಯ ಸಚಿವ ಬಿ. ಶ್ರೀರಾಮುಲು ತಾಯಿ ಹೊನ್ನೂರಮ್ಮ ವಿಧಿವಶ

ಆರೋಗ್ಯ ಸಚಿವ ಶ್ರೀರಾಮುಲು ತಾಯಿ ಹೊನ್ನೂರಮ್ಮ(95) ನಿನ್ನೆ ರಾತ್ರಿ 11:50 ಕ್ಕೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಹೊನ್ನೂರಮ್ಮ‌ ಇತ್ತೀಚೆಗಷ್ಟೇ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸಂಪೂರ್ಣ ಗುಣಮುಖರಾಗಿ ನಿನ್ನೆ ಅಂದರೆ ಗುರುವಾರವಷ್ಟೇ ಡಿಸ್ಚಾರ್ಜ್ ಆಗಿ ಬಳ್ಳಾರಿಯ ಮನೆಗೆ ಮರಳಿದ್ದರು.

ಆದರೆ, ನಿನ್ನೆ ರಾತ್ರಿ ವಯೋಸಹಜ ಕಾರಣದಿಂದ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದರಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದ್ರೆ ರಾತ್ರಿ 11:50 ಕ್ಕೆ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ 5:30 ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ ಬೆಳಗಿನ ಜಾವ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

ತಾಯಿಯ ನಿಧನದ ಬಗೆಗೆ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು “ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ.

“ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು.” ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top