fbpx
ಸಮಾಚಾರ

KRS ಬಾಗಿನ ಕಾರ್ಯಕ್ರಮಕ್ಕೆ 13 ಲಕ್ಷ ರೂ ಖರ್ಚು: ಬಾಳೆಕಂದು, ಮಾವಿನಸೊಪ್ಪಿಗೆ ಇಷ್ಟೊಂದು ದುಡ್ಡಾ? ಬಾಗಿನ ಅರ್ಪಣೆಯಲ್ಲೂ ಭ್ರಷ್ಟಾಚಾರದ ವಾಸನೆ !

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಅದ್ರಲ್ಲೂ ಕೊರೊನಾ ಅನುದಾನದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧಪಕ್ಷದ ನಾಯಕರು ಆರೋಪಿಸಿದ್ದರು. ಅದರ ಬೆನ್ನಲ್ಲೇ ಇದೀಗ KRS ಜಲಾಶಯಕ್ಕೆ ಬಾಗಿನ ಅರ್ಪಿಸಲು 13 ಲಕ್ಷ ತೋರಿಸಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಕಾರ್ಯಕ್ರಮದ ಖರ್ಚು ವೆಚ್ಚ 13 ಲಕ್ಷ ರೂ ಆಗಿದೆ ಎಂದು ಜಿಲ್ಲಾಡಳಿತ ಲೆಕ್ಕ ತೋರಿಸಿದೆ. ಇದಕ್ಕೆ ಜೆಡಿಎಸ್​ ಶಾಸಕ ರವೀಂದ್ರ ಶ್ರೀಕಂಠಯ್ಯ ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇವಲ ಮಾವಿನ ತೋರಣ ಮತ್ತು ಬಾಳೆಕಂದಿಗೆ 13 ಲಕ್ಷ ರೂ. ಬೇಕಾ..? ಎಂದು ಪ್ರಶ್ನೆ ಮಾಡೋ ಮೂಲಕ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಳೆಕಂದು, ಮಾವಿನಸೊಪ್ಪು, ಶಾಮಿಯಾನ, ವಿಡಿಯೋ, ಫೋಟೋಗೆ ಅಷ್ಟೊಂದು ಹಣ ಖರ್ಚಾಗುವುದೇ? ದುಂದುವೆಚ್ಚಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಆರೋಪಿಸಿದರು.

ಬಾಗಿನ ಕಾರ್ಯಕ್ರಮ ಆಯೋಜನೆಗೆ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಕ್ಷೇತ್ರದ ಶಾಸಕರ ಮಾತಿಗೆ ಬೆಲೆ ಇಲ್ಲವಾಗಿದೆ. ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಮತ್ತು ಅಧಿಕಾರಿಗಳು ಕೂಡ ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಉಸ್ತುವಾರಿ ಸಚಿವರಿಗಂತೂ ಯಾರ ಬಗ್ಗೆಯೂ ಕಾಳಜಿ ಇಲ್ಲ ಎಂದು ದೂರಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top