fbpx
ಸಮಾಚಾರ

ಕೊರೋನಾ ಗೆದ್ದ ಗಾಯಕ ಎಸ್​​ ಪಿ ಬಾಲಸುಬ್ರಹ್ಮಣ್ಯಂ

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ. ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ” ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ತಿಳಿಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೀತ ಸಾಹಿತಿ ಕೆ.ಕಲ್ಯಾಣ್ ಅವರು, ಗಾನ ಕೋಗಿಲೆಯ ಆರೋಗ್ಯ ಸ್ಥಿರವಾಗಿದೆ. ವೈದ್ಯ ಲೋಕದ ಎಲ್ಲ ಪ್ರಯೋಗಗಳ ಮೂಲಕ ಸ್ವರ ಸಾಮ್ರಾಟನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಕೊರೊನಾದಿಂದ ಮುಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು.

ಇನ್ನು ಕಳೆದ 9 ದಿನಗಳ ಹಿಂದೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಅವರನ್ನ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್​ನಲ್ಲಿಯೇ ಎಸ್​ಪಿಬಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top