fbpx
ಸಮಾಚಾರ

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ

ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. . ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಲಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ತಾವು ರಾಜಕೀಯಕ್ಕೆ ಸೇರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಅವರು ರಾಜಕೀಯ ಸೇರುವುದು ಈಗ ನಿಶ್ಚಿತವಾಗಿದೆ. ರಾಜಕೀಯಕ್ಕೆ ಸೇರುವ ಸಲುವಾಗಿಯೇ ಅವರು ಪೊಲೀಸ್‌ ಇಲಾಖೆಗೆ ರಾಜೀನಾಮೆ ನೀಡಿದ್ದರು. ಅವರು ರಾಜೀನಾಮೆ ನೀಡಿದ ಬಳಿಕ ಆರ್​ಎಸ್​ಎಸ್​ನ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಈ ಮೂಲಕ ತಾವು ಬಿಜೆಪಿ ಸೇರುವ ಸುಳಿವನನು ಆಗಲೇ ನೀಡಿದ್ದರು. ಅದರಂತೆ ಈಗ ಬಿಜೆಪಿ ಸೇರುತ್ತಿದ್ದಾರೆ.

ತಮಿಳುನಾಡಿಗೆ ಈಗ ಪರ್ಯಾಯ ಆಡಳಿತದ ಅಗತ್ಯವಿದೆ. ಆ ಮಾರ್ಗವನ್ನು ಬಿಜೆಪಿ ಒದಗಿಸಬಹುದೆಂದು ನಾನು ಭಾವಿಸುತ್ತೇನೆ. ಹೀಗಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ನಾನು ರಾಷ್ಟ್ರೀಯ ವಿಚಾರ ಹೊಂದಿರುವ ವ್ಯಕ್ತಿ. ಹೀಗಾಗಿ ನಾನು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ನರೇಂದ್ರ ಮೊದಿ ಅವರ ಬಗ್ಗೆ ಇರುವ ಮೆಚ್ಚುಗೆಯೇ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವಾಯಿತು ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top