fbpx
ಸಮಾಚಾರ

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ: 6ನೇ ತರಗತಿಯ ವಿವಾದಿತ ಪಾಠವನ್ನು ಕೈಬಿಟ್ಟ ಸರ್ಕಾರ

ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿದೆ ಎಂಬ ಆರೋಪಕ್ಕೆ ಆರನೇ ತರಗತಿಯ ಒಂದು ಪಾಠಕ್ಕೆ ಸರ್ಕಾರ ಕತ್ತರಿ ಹಾಕಲು ನಿರ್ಧರಿಸಿದೆ. ‘ಹೊಸ ಧರ್ಮಗಳ ಉದಯ’ ಎಂಬ ಪಾಠವು ಹಿಂದುಗಳ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗುವಂತಿರುವುದರಿಂದ ಪಾಠವನ್ನು ಕೈಬಿಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಈ ಪಾಠದಲ್ಲೇನಿದೆ?
ವೇದ ಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ-ಯಜ್ಞಗಳ ಹೆಸರಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು. ಇದರಿಂದ ಆಹಾರದ ಉತ್ಪಾದನೆ ಕುಂಠಿತವಾಯ್ತು. ಯಾಗಗಳಿಗೆ ಆಹಾರ ಧಾನ್ಯ- ಹಾಲು- ತುಪ್ಪಗಳನ್ನು ಹಾಕಿದ ಪರಿಣಾಮ ಆಹಾರದ ಅಭಾವವೂ ಉಂಟಾಯ್ತು.

ಯಾಗ ಯಜ್ಞಗಳಿಂದ ಮಾತ್ರ ಮುಕ್ತಿ ಸಾಧ್ಯ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿತ್ತು. ಸಂಸ್ಕೃತವೆಂಬ ಪುರೋಹಿತ ಭಾಷೆಯಲ್ಲಿ ಈ ಆಚರಣೆಗಳು ನಡೆಯುತ್ತಿದ್ದು ಜನ ಸಾಮಾನ್ಯರಿಗೆ ಇದು ಅರ್ಥವಾಗುತ್ತಿರಲಿಲ್ಲ. ಸರಳ ಮಾರ್ಗಗಳ ಮೂಲಕ ಮುಕ್ತಿ ಹೊಂದಲು ಹೊಸ ಧರ್ಮವನ್ನು ಜನ ಅಪೇಕ್ಷಿಸುತ್ತಿದ್ದರು ಎಂದು ಈ ಪಠ್ಯದಲ್ಲಿ ಹೇಳಲಾಗಿದೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆ ಪಠ್ಯವನ್ನೇ ಕೈ ಬಿಡೋದಾಗಿ ಹೇಳಿದ್ದಾರೆ. ಈ ಪಾಠ ಪುಸ್ತಕ ಈ ವರ್ಷ ಪ್ರಕಟವಾಗಿದ್ದಲ್ಲ, ಆದರೂ ಈ ವರ್ಷ ಈ ಪಾಠವನ್ನು ಮಾಡದಿರುವಂತೆ ಆದೇಶ ಮಾಡುತ್ತೇನೆ. ಮುಂದಿನ ವರ್ಷ ಪಠ್ಯ ಪುಸ್ತಕ ಪ್ರಕಟವಾಗುವಾಗ ಈ ಪಾಠ ತೆಗೆಸುತ್ತೇನೆ. ಈಗಾಗಲೇ ಪಠ್ಯ ಮುದ್ರಣವಾಗಿ ಮಕ್ಕಳಿಗೆ ತಲುಪಿದೆ. ಹಾಗಾಗಿ ಪಠ್ಯದಿಂದ ಹೊರತೆಗೆಯುವ ಮಾರ್ಪಾಡು ಮಾಡುವ ಹಾಗಿಲ್ಲ. ಈ ಬಗ್ಗೆ ವಿಷಾದವಿದೆ ಎಂದು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top