fbpx
ಸಮಾಚಾರ

ಸ್ಯಾಂಡಲ್‌ವುಡ್ ಗೆ ಡ್ರಗ್ಸ್ ಕಳಂಕ; ದಂಧೆಯಲ್ಲಿ ಪ್ರಖ್ಯಾತ ನಟರು ನಟಿಯರು ಮತ್ತು ಸಂಗೀತ ನಿರ್ದೇಶಕರ ಹೆಸರು

ಇತ್ತೀಚಿಗೆ ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವೊಂದರ ಮೇಲೆ ದಾಳಿ ಮಾಡಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಅಧಿಕಾರಿಗಳಿಗೆ,ಸ್ಯಾಂಡಲ್ ವುಡ್ ನ ಕೆಲ ಪ್ರಮುಖ ನಟರು ಹಾಗೂ ಸಂಗೀತಗಾರರು ಜಾಲದಲ್ಲಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಕರ್ನಾಟಕದ ಕೆಲ ಪ್ರಮುಖ ಸಂಗೀತ ನಿರ್ದೇಶಕರು ಮತ್ತು ನಟರಿಗೆ ಡ್ರಗ್ ಡೀಲರ್ ಜತೆ ಸಮೀಪದ ನಂಟಿದ್ದು, ಅವರ ಮೇಲೆ ನಿಗಾ ವಹಿಸಲಾಗಿದೆ ಎಂದು ಮಾದಕವಸ್ತು ನಿಯಂತ್ರಣ ಮಂಡಳಿ (ಎನ್‌ಸಿಬಿ) ಮಾಹಿತಿ ನೀಡಿದೆ.

ಎನ್‍ಸಿಬಿ ಕೆಲ ವಾರಗಳ ಹಿಂದೆ ಮಾದಕದ್ರವ್ಯಗಳ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಡೀಲರ್ ರೆಹಮಾನ್‌ನನ್ನು ಬಂಧಿಸಿತ್ತು. ಈತ ತನ್ನ ಕಾಲೇಜಿನ ವಿದ್ಯಾರ್ಥಿಗಳಿಗೆ ಮತ್ತು ನೆರೆಹೊರೆಯವರಿಗೆ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಆನ್‍ಲೈನ್‍ನಲ್ಲಿ ಬಿಟ್‍ಕಾಯಿನ್‍ಗಳ ವಿನಿಮಯದಿಂದ ಎಂಡಿಎಂಎ (ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್) ಮಾತ್ರೆಗಳ ಖರೀದಿ ಮಾಡುತ್ತಿದ್ದು, ತನಿಖೆ ವೇಳೆ ತಿಳಿದು ಬಂದಿತ್ತು.

ಇದೇ ಕಾರ್ಯಚರಣೆಯ ಮುಂದುವರಿದ ಭಾಗವಾಗಿ, ಪ್ರಕರಣದ ಮುಖ್ಯ ಕಿಂಗ್‍ಪಿನ್ ಆಗಿದ್ದ ಲೇಡಿ ಡ್ರಗ್ ಡೀಲರ್ ಬಂಧನವಾಗಿದೆ. ಜೊತೆಗೆ ಬೆಂಗಳೂರಿನ ದೊಡ್ಡ ಗುಬ್ಬಿಯಲ್ಲಿರುವ ಆಕೆಯ ಮನೆಯಿಂದ ಎಂಡಿಎಂಎಯ 270 ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ದಾಳಿ ವೇಳೆ ಎಂ ಅನೂಪ್, ಆರ್ ರವೀಂದ್ರನ್ ಮತ್ತು ಅನಿಖಾ ಡಿ ಎಂಬ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ

ಎನ್​​​ಸಿಬಿ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸುತ್ತಿದ್ದು, ಈ ದಂಧೆಯಲ್ಲಿ ಯಾರ್ಯಾರು ಪಾಲುದಾರರು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮ್ಯೂಸಿಕ್ ಡೈರೆಕ್ಟರ್​​ಗಳು ಹಾಗೂ ನಟ ನಟಿಯರು ನಿತ್ಯದ ಗ್ರಾಹಕರು ಅಂತ ಆರೋಪಿ ಹೇಳಿದ್ದು, ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ. ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆ ಇದೆ.

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top