fbpx
ಸಮಾಚಾರ

ಕರ್ನಾಟಕದಲ್ಲಿ 3 ಲಕ್ಷ ದಾಟಿದ ಸೋಂಕಿತರ ಸಂಖ್ಯೆ- ನೆನ್ನೆ 8,580 ಮಂದಿ ಕೇಸ್ ಪತ್ತೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ ಮೂರು ಲಕ್ಷದ ಗಡಿ ದಾಟಿದೆ. ನೆನ್ನೆ ರಾಜ್ಯದಲ್ಲಿ 8,580 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 133 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,091ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕೊರೋನಾ 8,580 ಮಂದಿ ತುತ್ತಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,00,406ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ನೆನ್ನೆ 7,249 ಮಂದಿ ಡಿಸ್ಚಾರ್ಜ್ ಆಗಿದ್ದು 2,11,680 ಮಂದಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಇನ್ನು 83, 608 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top