fbpx
ಸಮಾಚಾರ

ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಬಡ ವಿದ್ಯಾರ್ಥಿಗಳಿಗೆ ಮೊಬೈಲ್ ಕೊಡಿಸಿದ ಸೋನು ಸೂದ್

ಕೊರೋನಾ ಕಾಲದಲ್ಲಿ ಹಲವರ ಪಾಲಿಗೆ ಬಾಲಿವುಡ್ ನಟ ಸೋನು ಸೂದ್ ಅಕ್ಷರಶಃ ದೇವದೂತನಾಗಿ ಕಾಣಿಸಿಕೊಂಡಿದ್ದಾರೆ. ಯಾರೆಲ್ಲಾ ಕಷ್ಟದಲ್ಲಿದ್ದಾರೋ ಅವರಿಗೆ ತಮ್ಮ ಕೈಯಿಂದ ಸಾಧ್ಯವಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದಾರೆ ಸೋನು ಸೂದ್. ಇದೀಗ ನಟ ಮತ್ತೊಂದು ಮಾನವೀಯ ಕಾರ್ಯ ಮಾಡುವ ಮೂಲಕ ವಿದ್ಯಾರ್ಥಿಗಳ ಮನ ಗೆದ್ದಿದ್ದಾರೆ.

 

 

ಹೌದು. ಹರಿಯಾಣದ ಮೊರ್ನಿ ಎಂಬ ಪುಟ್ಟ ಹಳ್ಳಿಯ ಮಕ್ಕಳು ಮೊಬೈಲ್ ಇಲ್ಲದೆ ಆನ್ ಲೈನ್ ಕ್ಲಾಸಿಗೆ ಹಾಜರಾಗಲು ಅಸಾಧ್ಯವಾಗಿತ್ತು. ಬಡುಕುಟುಂಬದ ಮಕ್ಕಳಾಗಿದ್ದರಿಂದ ಮೊಬೈಲ್ ಖರೀದಿಸಿ ಕೊಡಲು ಹೆತ್ತವರಿಗೆ ಕಷ್ಟ ಸಾಧ್ಯವಾಗಿತ್ತು. ಈ ವಿಚಾರವನ್ನು ಪತ್ರಕರ್ತರೊಬ್ಬರು ಸುದ್ದಿ ಮಾಡಿದ್ದರು. ಅಲ್ಲದೆ ನಟ ಸೋನು ಸೂದ್ ಬಳಿ ಮಕ್ಕಳಿಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನಟ ಸೋನು ಸೂದ್, ಈ ಮಕ್ಕಳು ನಾಳೆಯೊಳಗೆ ಅವರು ತಮ್ಮ ಸ್ಮಾರ್ಟ್ ಫೋನ್ ಗಳನ್ನು ಹೊಂದಿರುತ್ತಾರೆ ಎಂದು ತಿಳಿಸಿದ್ದಾರೆ.

ಸದ್ಯ ನಟ ಮಕ್ಕಳಿಗೆ ಸ್ಮಾರ್ಟ್ ಪೂನ್ ಗಳನ್ನು ಕಳುಹಿಸಿದ್ದಾರೆ. ಮಕ್ಕಳಿಗೆ ಇದು ತಲುಪಿದ ಬಳಿಕ ಸಂತಸ ವ್ಯಕ್ತಪಡಿಸಿದ ಸೋನು ಸೂದ್, ತಮ್ಮ ಸ್ಮಾರ್ಟ್ ಫೋನ್ ಗಳ ಮೂಲಕ ಇಂದು ಎಲ್ಲಾ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವುದನ್ನು ನೋಡುವ ಅದ್ಭುತ ದಿನ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಸಂಕಷ್ಟವನ್ನು ತನ್ನ ಗಮನಕ್ಕೆ ತಂದವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top