fbpx
ಸಮಾಚಾರ

ಟಿಪ್ಪು ಸುಲ್ತಾನ್ ಬಗ್ಗೆ ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ

ಎಚ್ ವಿಶ್ವನಾಥ್ ಟಿಪ್ಪು ಬಗ್ಗೆ ಹೊಗಳುತ್ತಾ ಮಾತನಾಡಿರುವುದಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಈ ರೀತಿ ಮಾತನಾಡಬಾರದಿತ್ತು ಎಂದಿದ್ದಾರೆ.

ವಿಶ್ವನಾಥ್‌ ಅವರ ಟಿಪ್ಪು ಪರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ವಿಶ್ವನಾಥ್‌ ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಬಿಜೆಪಿ ನಿಲುವು ಬಹಳ ಸ್ಪಷ್ಟವಾಗಿದೆ. ಆದರೂ ಅವರು ಯಾಕೆ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಅವರೊಂದಿಗೆ ಮಾತನಾ ಡುತ್ತೇನೆ ಎಂದರು.

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ ಅವರು “ವಿಶ್ವನಾಥ್ ಅವರು ಯಾಕೆ, ಎಲ್ಲಿ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಟಿಪ್ಪು ವಿಷಯ ಈಗ ಮುಗಿದು ಹೋದ ಅಧ್ಯಾಯ, ಟಿಪ್ಪು ಒಳ್ಳೆಯವನೋ, ಕೆಟ್ಟವನೋ ಎಂಬ ಬಗ್ಗೆ ಚರ್ಚೆಯಾಗಿದೆ. ಈಗ ಹೇಳುವ ಅವಶ್ಯಕತೆ ಇರಲಿಲ್ಲ. ಈ ಬಗ್ಗೆ ಈಶ್ವರಪ್ಪ ಜೊತೆ ವೈಯಕ್ತಿಕವಾಗಿ ಭೇಟಿ ಮಾಡಿ ಚರ್ಚೆ ಮಾಡುವುದಾಗಿ ಹೇಳಿದರು.

ವಿಶ್ವನಾಥ್ ಹೇಳಿದ್ದು ಏನು?
ಟಿಪ್ಪು ಸುಲ್ತಾನ್ ಈ ನೆಲದ ಮಣ್ಣಿನ ಮಗ. ಆತ ಯಾವುದೇ ಒಂದು ಜಾತಿ-ಧರ್ಮಕ್ಕೆ ಸೇರಿದವನಲ್ಲ ಎಂಬ ಎಚ್.ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದರು. ಮುಂದುವರಿದು ಮಾತನಾಡಿದ ಕೆ.ಎಸ್.ಈಶ್ವರಪ್ಪ, ಟಿಪ್ಪು ಸುಲ್ತಾನ್ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ಎಚ್.ವಿಶ್ವನಾಥ್ ಆವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top