fbpx
ಸಮಾಚಾರ

ರಾಯಣ್ಣ ಪ್ರತಿಮೆ ವಿವಾದ: “ಸರ್ಕಾರ ತ್ವರಿತವಾಗಿ ಮಧ್ಯಪ್ರವೇಶಿಸಿ ಇತ್ಯರ್ಥಗೊಳಿಸಬೇಕು” ಸಂಸದ ಜಿಸಿ ಚಂದ್ರಶೇಖರ್ ಆಗ್ರಹ

ಪೀರನವಾಡಿಯಲ್ಲಿ ರಾತ್ರೋರಾತ್ರಿ ರಾಯಣ್ಣ ಮೂರ್ತಿ ಪ್ರತಿಷ್ಟಾಪಿಸಿದ ವಿಚಾರವಾಗಿ ಕನ್ನಡ ಪರ ಹೋರಾಟಗಾರರು ಮತ್ತು ಮರಾಠಿ ಪುಂಡರ ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ರಾಯಣ್ಣ ಪ್ರತಿಮೆ ವಿಚಾರ ವಿಕೋಪಕ್ಕೆ ಹೋಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತ್ವರಿತವಾಗಿ ಮಧ್ಯಪ್ರವೇಶಿಸಿ ಇತ್ಯರ್ಥಗೊಳಿಸಬೇಕೆಂದು ಸಂಸದ ಜಿಸಿ ಚಂದ್ರಶೇಖರ್ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಸಿಎಂ BSYಗೆ ಪತ್ರ ಬರೆಯುವ ಮೂಲಕ “ಸರ್ಕಾರ ತ್ವರಿತವಾಗಿ ಮಧ್ಯಪ್ರವೇಶಿಸಿ ಇತ್ಯರ್ಥಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

 

 

“ಅಪ್ರತಿಮ ದೇಶಭಕ್ತ, ಬಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಹೆಮ್ಮೆಯ ಕನ್ನಡಿಗ, ರಾಣಿ ಚೆನ್ನಮ್ಮನ ಬಲಗೈ ಬಂಟರಾದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ವಿರೋಧ ವ್ಯಕ್ತವಾಗಿರುವುದು ದುರದೃಷ್ಟಕರ.”

“ಸಂಗೊಳ್ಳಿ ರಾಯಣ್ಣ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದ್ದು ಪ್ರತಿಷ್ಠಾಪನೆಗೆ ಯಾವುದೇ ಅನಾನೂಕೂಲವಾಗದಂತೆ ಹಾಗು ಕನ್ನಡ ನಾಡಿನಲ್ಲೇ ವೀರ ಕನ್ನಡಿಗನಿಗೆ ಯಾವುದೇ ರೀತಿಯ ಧಕ್ಕೆ ಬರದಂತೆ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಗೌರವಾನ್ವಿತವಾಗಿ ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಬೇಕು ಹಾಗು ಕರ್ನಾಟಕದ ಅಸ್ಮಿತೆಯನ್ನು ಉಳಿಸುವ ಸಲುವಾಗಿ ಪ್ರತಿಮೆಯ ಪತಿಷ್ಠಾಪನೆಯನ್ನು ನಿರ್ವಿಘ್ನವಾಗಿ ನೆರವೇರಿಸಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top