fbpx
ಸಮಾಚಾರ

ಸಿಎಂ ಯಡಿಯೂರಪ್ಪಗೆ ಮತ್ತೊಮ್ಮೆ ಕೊರೋನಾ ಭೀತಿ

ಮಾರಕ ಕೊರೋನಾ ವೈರಸ್ ಸೋಂಕಿಗೆ ಕರ್ನಾಟಕದ ಮತ್ತೋರ್ವ ಶಾಸಕ ತುತ್ತಾಗಿದ್ದು, ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದ್ದು, ಪ್ರಸ್ತುತ ಅವರು ತಮ್ಮ ಸ್ವಗೃಹದಲ್ಲಿಯೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಶಾಸಕ ಅಭಯ ಪಾಟೀಲ ಕೂಡ ಪಾಲ್ಗೊಂಡಿದ್ದರು. ಅಲ್ಲದೆ ಅವರು ಬಿಮ್ಸ್‌ಗೆ ಕೊಡಮಾಡಿದ ಆಕ್ಸಿಜನ್‌ ಉಪಕರಣವನ್ನು ಉದ್ಘಾಟನೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ಮತ್ತೊಮ್ಮೆ ಕೊರೋನಾ ಭೀತಿ ಎದುರಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೂ ಸೋಂಕು ಭೀತಿ ಆರಂಭವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top