fbpx
ಸಮಾಚಾರ

“ಪೋಸ್ಟ್ ಮಾರ್ಟಮ್ ಯಾಕೆ ಮಾಡ್ಸಿರಲಿಲ್ಲ?” ಇಂದ್ರಜಿತ್​ ‘ಡ್ರಗ್ಸ್’ ಆರೋಪಕ್ಕೆ ತಿರುಗೇಟು ನೀಡಿದ ಚಿರು ಸರ್ಜಾ ಮಾವ

ಸ್ಯಾಂಡಲ್‌ವುಡ್‌ ನಲ್ಲಿ ಸಂಚಲನ ಮೂಡಿಸುತ್ತಿರುವ ಡ್ರಗ್ಸ್ ಮಾಫಿಯಾ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡಿರುವ ಆರೋಪಕ್ಕೆ ಸರ್ಜಾ ಫ್ಯಾಮಿಲಿ ತಿರುಗೇಟು ಕೊಟ್ಟಿದೆ. ಇತ್ತೀಚೆಗೆ ಮೃತಪಟ್ಟ ಯುವನಟನ ಶವಪರೀಕ್ಷೆ ಯಾಕೆ ಮಾಡ್ಲಿಲ್ಲ? ಎಂದು ಪ್ರಶ್ನಿಸಿದ್ದರು. ಈ ಮಾತು ಸ್ಯಾಂಡಲ್​ವುಡ್​ ನಟನ ಸಾವಿನ ಬಗ್ಗೆ ಹೊಸ ಅನುಮಾನ ಹುಟ್ಟು ಹಾಕಿತ್ತು. ಇದರ ಬೆನ್ನಲ್ಲೇ ಇಂದ್ರಜಿತ್​ ಆರೋಪಕ್ಕೆ ಸರ್ಜಾ ಫ್ಯಾಮಿಲಿ ತಿರುಗೇಟು ಕೊಟ್ಟಿದೆ.

ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ದಿವಂಗತ ಚಿರಂಜೀವಿ ಸರ್ಜಾ ಅವರ ಮಾವ ಸುಂದರ್​ ರಾಜ್​, ”ನಾವು ಡಾ.ರಾಜ್​ಕುಮಾರ್​ ಅವರನ್ನು ಪಾಲಿಸಿಕೊಂಡು ಬಂದವರು, ನಮ್ಮ ಕುಟುಂಬದಲ್ಲಿ ಅಂತಹ ದುರಾಭ್ಯಾಸ ಯಾರಿಗೂ ಇಲ್ಲ. ಮುಂಬೈ ಇಂಡಸ್ಟ್ರಿಯೇ ಬೇರೆ, ಸ್ಯಾಂಡಲ್​ವುಡ್​ ಇಂಡಸ್ಟ್ರಿಯೇ ಬೇರೆ. ಚಿರು ನಿಧನವಾಗಿರೋದು ಹೃದಯಾಘಾತದಿಂದ. ಆ ಸಮಯದಲ್ಲಿ ಕೋವಿಡ್ ಆರ್ಭಟ ಹೆಚ್ಚಾಗಿ​ ಇದ್ದದ್ದರಿಂದ ಪೋಸ್ಟ್ ಮಾರ್ಟಮ್​ ಮಾಡಲಿಲ್ಲ. ಚಿರು ಕಣ್ಮರೆಯಾಗಿ 3 ತಿಂಗಳಾಗಿದೆ. ಈ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಈಗ ನಾವಿಲ್ಲ.” ಎಂದು ಸ್ಪಷ್ಟನೆ ನೀಡಿದ್ದಾರೆ.

ಇಂದ್ರಜಿತ್ ಮಾಡಿದ್ದ ಆರೋಪವೇನು?
ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಮಾಧ್ಯಮಗಳ ಬಳಿ ಮಾತನಾಡಿದ್ದ ಇಂದ್ರಜಿತ್ ಅವರು “ಇತ್ತೀಚೆಗೆ ಮೃತಪಟ್ಟ ಯುವನಟನ ಶವಪರೀಕ್ಷೆ ಯಾಕೆ ಮಾಡ್ಲಿಲ್ಲ?” ಎಂದು ಪ್ರಶ್ನಿಸಿದ್ದರು. ಈ ಮಾತು ಸ್ಯಾಂಡಲ್​ವುಡ್​ ನಟನ ಸಾವಿನ ಬಗ್ಗೆ ಹೊಸ ಅನುಮಾನ ಹುಟ್ಟು ಹಾಕಿತ್ತು. ಇದರ ಬೆನ್ನಲ್ಲೇ ಇಂದ್ರಜಿತ್​ ಆರೋಪಕ್ಕೆ ಸರ್ಜಾ ಫ್ಯಾಮಿಲಿ ತಿರುಗೇಟು ಕೊಟ್ಟಿದೆ.

“ಇತ್ತೀಚಿಗೆ ಯುವ ನಟರೊಬ್ಬರು ತೀರಿಹೋದಾಗ ಎಲ್ಲರಿಗೂ ನೋವಾಗಿತ್ತು. ಆದರೆ ಈ ಬಗ್ಗೆ ಒಂದೇ ಒಂದು ತನಿಖೆ ಆಗಲಿಲ್ಲ. ಮೃತ ದೇಹಕ್ಕೆ ಯಾವುದೇ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಿಲ್ಲ. ಪೋಸ್ಟ್ ಮಾರ್ಟಮ್ ನಡೆಸದಂತೆ ರಾಜಕೀಯ ಒತ್ತಡ ಹೇರಲಾಯಿತು” ಎಂದು ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದರು.

“ಆ ನಟನ ಕುಟುಂಬಕ್ಕೆ ನೋವು ಮಾಡುವ ಉದ್ದೇಶ ನನಗಿಲ್ಲ. ಆದರೆ, ಮರಣೋತ್ತರ ಪರೀಕ್ಷೆ ಏಕೆ ನಡೆಸಿಲ್ಲವೆಂಬುದೇ ನನ್ನ ಪ್ರಶ್ನೆ. ಡ್ರಗ್ಸ್​ನಿಂದಲೇ ಆ ನಟ ಮೃತಪಟ್ಟಿದ್ದರಾ ಎಂದು ತನಿಖೆ ನಡೆಸಿದ್ದರೆ ಎಲ್ಲ ಮಾಹಿತಿ ಬಹಿರಂಗವಾಗುತ್ತಿತ್ತು. ಜೊತೆಗೆ, ಡ್ರಗ್ಸ್​ ಜಾಲದಲ್ಲಿ ಇನ್ನೂ ಯಾರೆಲ್ಲಾ ಇದ್ದಾರೆ. ಇದರಿಂದ ಯಾರ್ಯಾರಿಗೆ ಚಿತ್ರರಂಗದಲ್ಲಿ ಅವಕಾಶ ಸಿಕ್ಕಿದೆ ಎಂದೂ ತಿಳಿಸುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top