fbpx
ಸಮಾಚಾರ

ಮಾಜಿ ರಾಷ್ಟ್ರಪತಿ ಭಾರತ ರತ್ನ ‘ಪ್ರಣಬ್ ಮುಖರ್ಜಿ’ ಇನ್ನಿಲ್ಲ

ದೇಶದ ಕಂಡ ಅತ್ಯುತ್ತಮ ರಾಜಕಾರಣಿ, ಆರ್ಥಿಕ ತಜ್ಞ ಮಾಜಿ ರಾಷ್ಟ್ರಪತಿ ಭಾರತರತ್ನ ಪ್ರಣಬ್ ಮುಖರ್ಜಿ ಇಂದು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ರಿಸರ್ಚ್ ಆಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾಮ ಮುಖರ್ಜಿ ಆಗಸ್ಟ್ 10ರಂದು ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪ್ರಣಬ್ ಮುಖರ್ಜಿ ಅವರಿಗೆ , ಅದರಿಂದ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

 

ಆಗಸ್ಟ್ 10ರಂದು ಪ್ರಣಬ್ ಮುಖರ್ಜಿ ಅವರು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಆ ಬಳಿಕ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಿದರೂ ಯಾವುದೇ ರೀತಿ ಚೇತರಿಕೆ ಕಂಡು ಬಂದಿರಲಿಲ್ಲ. ಹೀಗಾಗಿ ಅವರನ್ನು ಕೊರೊನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿತ್ತು.

 

ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಗಳಾಗುವ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top