fbpx
ಸಮಾಚಾರ

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ‌: ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ನೋಟಿಸ್

ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ನಟಿ ರಾಗಿಣಿ ದ್ವಿವೇದಿ ಸಿಸಿಬಿ ಕಛೇರಿಕೆ ಭೇಟಿ ಕೊಡಬೇಕಿದೆ. ನೋಟೀಸ್ ನೀಡಿರುವುದನ್ನು ಸಿಸಿಬಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ರವಿಶಂಕರ್ ಎಂಬುವವರನ್ನು ಸಿಸಿಬಿ ಅಧಿಕಾರಿಗಳು ತನಿಖೆ ಮಾಡಿದ್ದಾರೆ, ಆಗ ಅವರು ರಾಗಿಣಿ ಹೆಸರು ಬಾಯಿಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ನೇತೃತ್ವದ ಮೇರೆಗೆ ರವಿಶಂಕರ್ ಅವರನ್ನು ತನಿಖೆ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಪಾರ್ಟಿಯೊಂದರಲ್ಲಿ ಜಗಳ ಮಾಡಿಕೊಂಡಿದ್ದ ನಟಿ ರಾಗಿಣಿಯೊಂದಿಗೆ ಅಂದು ರವಿಶಂಕರ್ ಇದ್ದರು. ಆಗ ಹಲ್ಲೆಯಾಗಿತ್ತು. ಸ್ಟಾರ್ ನಟಿಯ ಹಳೆಯ ಗೆಳೆಯ ರವಿಶಂಕರ್ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆಯ ಬಳಿಕ ರವಿಶಂಕರ್ ಅಶೋಕರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆ ಸಂದರ್ಭದಲ್ಲಿ ರಾಗಿಣಿ ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡಿದ ಬಳಿಕ ರವಿಶಂಕರ್ ದೂರು ವಾಪಸ್ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಈ ಪ್ರಕರಣ ಇನ್ನೂ ಇತ್ಯಾರ್ಥವಾಗಿಲ್ಲ. ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗ ರಾಗಿಣಿ ಮತ್ತು ರವಿಶಂಕರ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ. ನಿನ್ನೆ ತಡರಾತ್ರಿವರೆಗೂ ರವಿಶಂಕರ್ ವಿಚಾರಣೆ ನಡೆದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top