fbpx
ಸಮಾಚಾರ

ಡ್ರ*ಗ್ಸ್ ಮಾಫಿಯಾ: ಬೆಳ್ಳಂಬೆಳಗ್ಗೆ ತುಪ್ಪದ ಬೆಡಗಿಗೆ ಶಾಕ್:ರಾಗಿಣಿ ಮನೆಗೆ ಸಿಸಿಬಿ ದಾಳಿ, ಅಧಿಕಾರಿಗಳಿಂದ ಶೋಧಕಾರ್ಯ ಶುರು

ಸ್ಯಾಂಡಲ್ ವುಡ್ ಬೆಡಗಿ ನಟಿ ರಾಗಿಣಿಗೆ ಶುಕ್ರವಾರ ಬೆಳ್ಳಂಬೆಳಿಗ್ಗೆ ಸಿಸಿಬಿ ಪೊಲೀಸರು ಶಾಕ್ ನೀಡಿದ್ದು, ಯಲಹಂಕದಲ್ಲಿರುವ ಅವರ ನಿವಾಸಕ್ಕೆ ತೆರಳಿ ಶೋಧಕಾರ್ಯ ನಡೆಸುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಸರ್ಚ್ ವಾರೆಂಟ್ ನೊಂದಿಗೆ ತೆರಳಿರುವ ಸಿಸಿಬಿ ಪೊಲೀಸರು ಯಲಹಂಕದ ಜ್ಯುಡಿಷಿನಲ್ ಲೇಓಟ್ ನಲ್ಲಿರುವ ರಾಗಿಣಿಯವರ ಅಪಾರ್ಟ್’ಮೆಂಟ್ ನಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ.

ನಟಿ ರಾಗಿಣಿ ಮನೆ ಮೇಲೆ ರೈಡ್ ಮಾಡಿರೋದಾಗಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ರಾಗಿಣಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ರಾಗಿಣಿಗೆ ಮನೆಗೆ ಸಿಸಿಬಿ ಅಧಿಕಾರಿಗಳು ಆಗಮಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಯ ಇಡೀ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ. ಇದೇ ವೇಳೆ ರಾಗಿಣಿಗೆ ಸೇರಿದ ಬರೋಬ್ಬರಿ ನಾಲ್ಕು ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಚಲಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮನೆ ತಪಾಸಣೆ ಮಾಡುತ್ತಿದ್ದಾರೆ. ಇದೀಗ ನಟಿ ರಾಗಿಣಿ ಬಂಧನದ ಭೀತಿಯಲ್ಲಿದ್ದಾರೆ.

ಪ್ರಕರಣ ಸಂಬಂಧ ನೋಟಿಸ್ ಜಾರಿ ಮಾಡಿದ್ದರು ಗುರುವಾರ ರಾಗಿಣಿಯವರು ವಿಚಾರಣೆಗೆ ಗೈರಾಗಿದ್ದರು. ವೈಯಕ್ತಿಕ ಕಾರಣ ನೀಡಿ ಗೈರಾಗಿರುವ ನಟಿ, ಸೋಮವಾರ ವಿಚಾರಣೆಗೆ ಬರಲು ಬದ್ಧರಾಗಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಇದಕ್ಕೆ ಒಪ್ಪದ ಸಿಸಿಬಿ ಪೊಲೀಸರು, 2ನೇ ಬಾರಿ ನೋಟಿಸ್ ನೀಡಿದ್ದು, ಮತ್ತೆ ಗೈರಾದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದೆ ಎಂದು ಹೇಳಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top