fbpx
ಸಮಾಚಾರ

“ಈ ಆರೋಪಗಳೆಲ್ಲಾ ಸುಳ್ಳು, ನನ್ನ ಮಗಳು ಆರೋಪ ಮುಕ್ತಳಾಗಿ ಬರ್ತಾಳೆ” ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಹೇಳಿಕೆ

ಬೃಹತ್ ಡ್ರಗ್ಸ್ ಮಾಫಿಯಾ ದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ವಶದಲ್ಲಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಎಲ್ಲಾ ಆರೋಪಗಳಿಂದ ಮುಕ್ತಳಾಗಿ ಬರುತ್ತಾರೆ ಎಂದು ತಾಯಿ ರೋಹಿಣಿ ದ್ವಿವೇದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಖಾಸಗಿ ಮಾಧ್ಯಮದೊಂದಿಗೆ ಮಾತನಾಡಿದ ರೋಹಿಣಿ ಅವರು “ನನ್ನ ಮಗಳ ಮೇಲೆ ಮಾಡಲಾಗಿರುವ ಆರೋಪಗಳೆಲ್ಲ ಸುಳ್ಳು. ಅವಳನ್ನು ಸಿಕ್ಕಿ ಹಾಕಿಸಲು ಪಿತೂರಿ ನಡೆಸಲಾಗುತ್ತಿದೆ. ಇದೆಲ್ಲವೂ ಸುಳ್ಳು, ನನ್ನ ಮಗಳು ಈ ಪ್ರಕರಣದಿಂದ ಮುಕ್ತಳಾಗಿ ಬರುತ್ತಾಳೆ. ನಾನು ಎಲ್ಲ ರೀತಿಯ ದಾಖಲೆಗಳನ್ನು ಸಲ್ಲಿಸುತ್ತೇನೆ. ಬೇಗನೆ ನನ್ನ ಮಗಳು ಆರೋಪದಿಂದ ಮುಕ್ತಳಾಗುತ್ತಾಳೆ” ಎಂದು ಹೇಳಿದರು.

ಸದ್ಯ ಸಿಸಿಬಿ ಪೋಲೀಸರ ವಶದಲ್ಲಿರುವ ನಟಿ ರಾಗಿಣಿಯನ್ನು ಭೇಟಿ ಮಾಡಲು ಕುಟುಂಬಸ್ಥರು ಸಿಸಿಬಿ ಕಚೇರಿಗೆ ಆಗಮಿಸಿದ್ದರು. ಆದರೆ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಈ ವೇಳೇ ಅವರ ತಾಯಿ ರೋಹಿಣಿ ಖಾಸಗಿ ಮಾಧ್ಯಮಗಳ ಜೊತೆ ಮಾತನಾಡಿ, ತಮ್ಮ ಮಗಳನ್ನು ಬಿಡಿಸಿಕೊಂಡು ಬರಲು ದಾಖಲೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top