ತಡರಾತ್ರಿ ಮದ್ಯದ ಅಮಲಿನಲ್ಲಿ ಪೊಲೀಸರ ಜತೆ ಸ್ಯಾಂಡಲ್ ವುಡ್ ನಟ ಹರ್ಷ ಕಿರಿಕ್ ಮಾಡಿಕೊಂಡಿದ್ದಾರೆ. ಹರ್ಷ ಕಿರಿಕ್ ಮಾಡಿಕೊಂಡ ನಟ.
ರಾತ್ರಿ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್ಮೆಂಟ್ ಮುಂಭಾಗ ಗೆಳೆಯರೊಂದಿಗೆ ನಟ ಹರ್ಷ ಕುಡಿಯುತ್ತಿದ್ದರು. ಅಪಾರ್ಟ್ಮೆಂಟ್ ಮುಂದೆ ಕುಡಿಯುತ್ತಿರುವ ವಿಚಾರ ತಿಳಿದು ರಾತ್ರಿ ಬೀಟ್ನಲ್ಲಿದ್ದ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಕುಡಿದು ಇಲ್ಲಿ ಯಾಕೆ ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಹರ್ಷ ಮತ್ತು ಗೆಳೆಯರು ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಕೂಡಲೇ ಕಿರಿಕ್ ಮಾಡಿದವರನ್ನು ಬಾಗಲಗುಂಟೆ ಪೊಲೀಸರು ವಶಕ್ಕೆ ಠಾಣೆಗೆ ಕರೆದುಕೊಂಡು ಹೋಗಿ ಬುದ್ಧಿ ಮಾತು ಹೇಳಿ ಇನ್ನೊಮ್ಮೆ ಈ ರೀತಿ ಮಾಡದಂತೆ ವಾರ್ನಿಗ್ ನೀಡಿ ಕಳಿಸಿದ್ದಾರೆ.
ನಟ ಹರ್ಷ ಸ್ಯಾಂಡಲ್ ವುಡ್ನ ಚಿತ್ರಗಳಲ್ಲಿ ನಟಿಸಿದ್ದಾರೆ. ರಾಜಾಹುಲಿ, ವರ್ಧನ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
