fbpx
ಸಮಾಚಾರ

“ರಾಗಿಣಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ” ಪಕ್ಷದ ಅಧಿಕೃತ ಪ್ರಕಟಣೆ

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷ ಸ್ಪಷ್ಟನೆ ನೀಡಿದೆ. ರಾಗಿಣಿ ಅವರು ಬಿಜೆಪಿ ಸದಸ್ಯರಲ್ಲ ಹಾಗೂ ಚುನಾವಣೆ ಸಂದರ್ಭದಲ್ಲಿ ಅವರಿಗೆ ಪಕ್ಷ ಯಾವುದೇ ಜವಾಬ್ದಾರಿ ನೀಡಲಿರಲಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ರಾಗಿಣಿ ಬಂಧನ ಪ್ರಕರಣ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಘಟಕದ ವಕ್ತಾರ ಗಣೇಶ್‌ ಕಾರ್ಣಿಕ್ ‘ಸಮಾಜದ ವಿವಿಧ ಸ್ತರದ ನೂರಾರು ಖ್ಯಾತನಾಮರು 2019ರ ಉಪ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದರು. ಚಿತ್ರನಟಿ ರಾಗಿಣಿ ದ್ವಿವೇದಿ ಅವರಲ್ಲಿ ಒಬ್ಬರಾಗಿರಬಹುದು’ ಎಂದು ಸ್ಪಷ್ಟಪಡಿಸಿದ್ದಾರೆ.

 

 

“ರಾಗಿಣಿ ದ್ವಿವೇದಿ ಅವರು ಬಿಜೆಪಿಯ ಸದಸ್ಯರಲ್ಲ. ಬಿಜೆಪಿ ಅವರಿಗೆ ಯಾವುದೇ ಚುನಾವಣೆಯ ಯಾವುದೇ ಕಾರ್ಯಭಾರ ವಹಿಸಿರಲಿಲ್ಲ. ಅವರು ಸ್ವತಃ ತಾವೇ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ರಾಗಿಣಿ ದ್ವಿವೇದಿ ಅವರ ವೈಯಕ್ತಿಕ ಅಥವಾ ವೃತ್ತಿ ಜೀವನದ ಕಾರ್ಯ ಚಟುವಟಿಕೆಗಳಿಗೆ ಬಿಜೆಪಿ ಹೊಣೆಯಾಗುವುದಿಲ್ಲ ಅಥವಾ ಅದಕ್ಕೆ ಉತ್ತರ ನೀಡುವ ಅಗತ್ಯವೂ ಇರುವುದಿಲ್ಲ. ಇದಕ್ಕೂ ನಮಗೂ ಸಂಬಂಧವಿಲ್ಲ. ನಾವು ಅದರಿಂದ ಅಂತರ ಕಾಯ್ದುಕೊಳ್ಳುತ್ತೇವೆ.”

ಬಿಜೆಪಿ ಯಾವುದೇ ವ್ಯಕ್ತಿಯ, ಯಾವುದೇ ಸ್ವರೂಪದ, ಯಾವುದೇ ರೂಪದ ಸಮಾಜಘಾತಕ ಚಟುವಟಿಕೆಗಳಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ. ನಾವು ಎಂದಿಗೂ ಅಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ಅಥವಾ ಬೆಂಬಲ ನೀಡುವದಿಲ್ಲ. ಹೀಗಾಗಿ ರಾಗಿಣಿ ದ್ವಿವೇದಿ ಅವರು ಮಾದಕ ದ್ರವ್ಯ ಜಾಲದಲ್ಲಿ ತೊಡಗಿಕೊಂಡಿದ್ದಾರೆಂಬುದಕ್ಕೂ ನಮಗೂ ಸಂಬಂಧವಿಲ್ಲ” ಎಂದು ಬಿಜೆಪಿ ತಿಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top