fbpx
ಸಮಾಚಾರ

ದಕ್ಷಿಣ ಭಾರತದ ಖ್ಯಾತ ಪೋಷಕ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ

ವಿಭಿನ್ನ ಪಾತ್ರಗಳ ಮೂಲಕ ರಂಜಿಸುತ್ತಿದ್ದ ದಕ್ಷಿಣ ಭಾರತದ ಖ್ಯಾತ ನಟ ಜಯಪ್ರಕಾಶ್​ ರಡ್ಡಿ ಕೊನೆಯುಸಿರೆಳೆದಿದ್ದಾರೆ. 74 ವರ್ಷದ ನಟನ ಸಾವಿಗೆ ಕಾರಣ ಹೃದಯಾಘಾತ ಎಂದು ಹೇಳಲಾಗುತ್ತಿದೆ.

ಮಂಗಳವಾರ ಬೆಳಗಿನ ಜಾವ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಮನೆಯ ಸ್ನಾನದ ಕೋಣೆಯಲ್ಲಿ ಕುಸಿದು ಬಿದ್ದ ನಟನನ್ನು ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿಗೆ ಹೋಗುವಷ್ಟರಲ್ಲೇ ನಟ ಸಾವನ್ನಪ್ಪಿದ್ದರಂತೆ.

ಬ್ರಹ್ಮಪುತ್ರುಡು ಚಿತ್ರದ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದ್ದ ಜಯಪ್ರಕಾಶ್​ ಅವರು ಭಗವಾನ್​, ಬಾವಗಾರು ಬಾಗುನ್ನಾರಾ, ಸಮರ ಸಿಂಹ ರೆಡ್ಡಿ ಸಿನಿಮಾಗಳಲ್ಲಿ ವಿಲನ್​ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. ಖಳನಟನ ಪಾತ್ರಗಳ ಜೊತೆಗೆ ಕಾಮಿಡಿ ರೋಲ್​ಗಳಲ್ಲೂ ರಂಜಿಸುತ್ತಿದ್ದ ಜಯಪ್ರಕಾಶ್​ ರೆಡ್ಡಿ ಕಡೆಯದಾಗಿ ಸರಿಲೇರು ನೀಕೆವ್ವರು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top