fbpx
ಸಮಾಚಾರ

ಖ್ಯಾತ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಕಿರುತೆರೆ ನಟಿ ಶ್ರಾವಣಿ ಆತ್ಮಹತ್ಯೆ

ತೆಲುಗು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಕಿರುತೆರೆ ನಟಿ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್‌ನ ಎಸ್. ಆರ್. ನಗರದ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಗರದಲ್ಲಿ ನಟಿ ಶ್ರಾವಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದರಾಬಾದ್‌ನ ಮಥುರಾ ನಗರದ ಹೆಚ್ 56 ಬ್ಲಾಕ್‌ನ ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದ ಶ್ರವಾಣಿ ರಾತ್ರಿ 9-10ರ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಖ್ಯಾತ ಧಾರಾವಾಹಿ ‘ಮನಸು ಮಮತಾ’ ಸೀರಿಯಲ್ ನಲ್ಲಿ ಮುಖ್ಯ ನಟಿಯಾಗಿದ್ದ ಹಾಗೂ ತೆಲುಗಿನ 8 ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದ ಶ್ರಾವಣಿ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ದೇವರಾಜ್ ರೆಡ್ಡಿ ಎಂಬಾತನ ಕಿರುಕುಳದಿಂದ ನಮ್ಮ ಮಗಳು ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶ್ರಾವಣಿ ಪೋಷಕರು ಎಸ್.ಆರ್.ನಗರ ಠಾಣೆಗೆ ದೂರು ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top