fbpx
ಸಮಾಚಾರ

ಬಿಗ್‍ಬಾಸ್ ಪ್ರಿಯರಿಗೆ ಕಹಿ ಸುದ್ದಿ

ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಪ್ರಿಯರಿಗೆ ಇದು ಕಹಿ ಸುದ್ದಿ. ಹೌದು, ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ.. ಈ ಬಾರಿ ಕೊರೋನಾ ಕಾರಣದಿಂದಾಗಿ ‘ಬಿಗ್ ಬಾಸ್’ ಪ್ರಸಾರವಾಗಲ್ಲ ಎಂದು ಹೇಳಲಾಗಿದೆ.

ಈಗಾಗಲೇ ತೆಲುಗಿನಲ್ಲಿ ಬಿಗ್‍ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ ಬಿಗ್‍ಬಾಸ್ ನಡೆಯುವುದಿಲ್ಲ ಎಂಬ ಸುದ್ದಿ ಪ್ರಕಟವಾಗಿದೆ.

ಪ್ರತಿವರ್ಷ ಸೆಪ್ಟೆಂಬರ್ ತಿಂಗಳಿನಿಂದ ಬಿಗ್‍ಬಾಸ್ ಆರಂಭವಾಗುತ್ತಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಶೋ ಶುರು ಮಾಡಲು ಸಾಧ್ಯವಾಗಿಲ್ಲ.

ಇನ್ನು ಆರು ತಿಂಗಳು ತಡವಾಗಿ ಬಿಗ್‍ಬಾಸ್ ಶುರುವಾಗಲಿದೆ ಎನ್ನಲಾಗುತ್ತಿದೆ. ಅಂದರೆ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಶುರುವಾಗಲಿದೆ. ಹೀಗಾಗಿ ಸದ್ಯಕ್ಕೆ 2020ರಲ್ಲಿ ಬಿಗ್‍ಬಾಸ್ ಶೋ ಪ್ರಸಾರವಾಗಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top