fbpx
ಸಮಾಚಾರ

ಆನ್​ಲೈನ್​ನಲ್ಲೆ ವಿಷ್ಣು ಸ್ಮಾರಕದ ಭೂಮಿ ಪೂಜೆಗೆ ಚಾಲನೆ ನೀಡಲಿದ್ದಾರೆ ಸಿಎಂ ಯಡಿಯೂರಪ್ಪ

ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.

ಹೌದು, ಭಾರತಿ ವಿಷ್ಣುವರ್ಧನ್​ ಅವರು ಇಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದರು. ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಸೆಪ್ಟೆಂಬರ್ 15ಕ್ಕೆ ವಿಷ್ಣು ಸ್ಮಾರಕದ ಭೂಮಿ ಪೂಜೆ ನಡೆಯಲಿದೆ. ಆನ್​ಲೈನ್​ನಲ್ಲಿ ಮುಖ್ಯಮಂತ್ರಿಗಳು ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.

11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಆಗುತ್ತಿದೆ. ಈ ತಿಂಗಳ 15ರಂದು ಸ್ಮಾರಕದ ಗುದ್ದಲಿ ಪೂಜೆ ಕಾರ್ಯಕ್ರಮವಿದೆ. ಸೂಕ್ತ ಭದ್ರತೆಗಾಗಿ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಸಿಎಂಗೆ ಮನವಿ ಮಾಡಿದ್ದೇವೆ ಎಂದರು.

ಕೋವಿಡ್ ಇರೋ ಕಾರಣ ಸಿ.ಎಂ ಗುದ್ದಲಿಪೂಜೆಗೆ ಬರಲು ಆಗುತ್ತಿಲ್ಲ. ಹೀಗಾಗಿ ಅವರು ಆನ್ ಲೈನ್ ಮೂಲಕ ವಿಷ್ಣು ಸ್ಮಾರಕದ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top