fbpx
ಸಮಾಚಾರ

“ನನ್ ಜೊತೆನೂ ರಾಗಿಣಿ ಫೋಟೋ ಇರಬಹುದು” ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಚಿತ್ರನಟಿ ಎಂಬ ಕಾರಣಕ್ಕೆ ರಾಗಿಣಿಯನ್ನು ಅಂತ ಉಪ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರಕ್ಕೆ ತಗೆದುಕೊಂಡಿದ್ದೆವು, ಡ್ರಗ್ಸ್ ಹುಡುಗಿ ಅಂತ ಅಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬಿಜೆಪಿ ಪರ ಡ್ರಗ್ಸ್ ಪ್ರಕರಣದ ಆರೋಪಿ ನಟಿ ರಾಗಿಣಿ ಪ್ರಚಾರ ಮಾಡಿದ ವಿಚಾರದ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮತನಾಡಿದ ಜಾರಕಿಹೊಳಿಪ್ರತಿಕ್ರಿಯಿಸಿದರು. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ, ತನಿಖೆ ನಡೆಯುತ್ತಿದೆ. ಎಷ್ಟೇ ಪ್ರಭಾವಿಗಳಿದ್ದರೂ ಕ್ರಮ ಆಗಲಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವರೊಂದಿಗೆ ಡ್ರಗ್ಸ್ ಪೆಡ್ಲರ್​ಗಳು ಫೋಟೋ ತೆಗೆಸಿಕೊಂಡಿದ್ದಾರೆ ಎಂದಾಕ್ಷಣ ಪ್ರಭಾವ ಬೀರುತ್ತಾರೆ ಎನ್ನುವುದು ಸರಿಯಲ್ಲ. ಫೋಟೋ ತೆಗೆಸಿಕೊಂಡಿರುವುದು ಬಂದಿದೆ ಎಂದ ಮಾತ್ರ ಸ್ನೇಹ, ನಂಟು ಕಲ್ಪಿಸಲಾಗದು. ಪ್ರಕರಣ ತನಿಖೆ ಹಂತದಲ್ಲಿರುವಾಗ ಏನನ್ನದಾರೂ ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಗಿಣಿ ಎಂದು ಭಾವಿಸಿ ನಾವು ಪ್ರಚಾರಕ್ಕೆ ಕರೆ ತಂದಿದ್ವಿ. ಅದನ್ನು ಬಿಟ್ಟು ಡ್ರಗ್ಸ್ ಹುಡುಗಿ ಅಂತ ಕರೆದಿರಲಿಲ್ಲ. ಆಕೆಯ ಫೋಟೋ ಎಲ್ಲರ ಜೊತೆ ಇರಬಹುದು. ಡಿಕೆ ಶಿವಕುಮಾರ್ ಜೊತೆಯೂ ಫೋಟೋ ಇರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ನನ್ನ ಜೊತೆಯೂ ಇರಬಹುದು. ಕುಮಾರಸ್ವಾಮಿ ಜೊತೆಯೂ ಇರಬಹುದು. ಅದರ ಬಗ್ಗೆ ನಾನು ಮಾತಾಡಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top