fbpx
ಸಮಾಚಾರ

IPL‌ ಆರಂಭಕ್ಕೂ ಮುನ್ನ RCB ಸಂಯೋಜನೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ನಾಯಕ ವಿರಾಟ್ ಕೊಹ್ಲಿ

ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಆರಂಭವಾಗಲು ಇನ್ನೂ ಕೆಲವೇ ದಿನಗಳು ಬಾಕಿ ಇವೆ. ಈ ಮದ್ಯೆ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್‌ ಕೊಹ್ಲಿ ತಂಡದ ಸಮಯೋಜನೆ ಬಲಿಷ್ಟವಾಗಿದೆ ಎನ್ನುವ ಮೂಲಕ ಈ ಬಾರಿ ಆವೃತ್ತಿಯ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಐಪಿಎಲ್ 2016ರ ಬಳಿಕ ಪ್ರಸ್ತುತ ಬೆಂಗಳೂರು ತಂಡ ಅತ್ಯಂತ ಸಮತೋಲಿತ ತಂಡವಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಬೆಂಗಳೂರು ತಂಡ 2016ರ ಫೈನಲ್‌ ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು.

ಈ ಬಾರಿ ಯುವ ಮತ್ತು ಅನುಭವಿ ಆಟಗಾರರ ಉತ್ತಮ ಸಂಯೋಜನೆ ಇದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೇಕಾದ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ವಿರಾಟ್ ಆರ್‌ಸಿಬಿ ಟಿವಿಗೆ ತಿಳಿಸಿದರು. ತಂಡದ ಯುವ ಆಟಗಾರರು ತಮ್ಮ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಾಗಿದ್ದಾರೆ ಮತ್ತು ಈ ಬಾರಿ ಅವರು ಅವಕಾಶಗಳಿಗಾಗಿ ಕಾಯುತ್ತಿದ್ದಾರೆ ಎಂದು ಅವರು ಹೇಳಿದರು.

ಇದರೊಂದಿಗೆ 2017ರಿಂದ 2019ರ ಆವೃತ್ತಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಮತೋಲನದಿಂದ ಕೂಡಿರಲಿಲ್ಲ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 2016ರ ಬಳಿಕ RCB ಗಮನಾರ್ಹ ಪ್ರದರ್ಶನ ತೋರಲು ಪದೇ ಪದೇ ವಿಫಲವಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top