fbpx
ಸಮಾಚಾರ

ನಟಿ ಸಂಜನಾ ಜೊತೆ ಲಂಕಾ ಪ್ರಯಾಣ ಆರೋಪ– ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್‌ ದಾಖಲು

ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಬಗ್ಗೆ ಅಪಪ್ರಚಾರ ಮಾಡಿದ್ದ ಹಾಗೂ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಶ್ರೀಲಂಕಾದ ಕೊಲಂಬೋದಲ್ಲಿ ಸಂಜನಾ ಮತ್ತು ಜಮೀರ್ ಇದ್ದರು. ನಾನು ಸುಳ್ಳು ಹೇಳುತ್ತಿಲ್ಲ. ನೀವು ಜೂಜು ಮತ್ತು ಡ್ರಗ್ಸ್ ನಲ್ಲಿ ಭಾಗಿಯಾಗದೇ ಇದ್ದರೆ ನಿಮಗೆ ಹೆದರಿಕೆ ಯಾಕೆ ಎಂದು ಪ್ರಶಾಂತ್ ಸಂಬರಗಿ ಪ್ರಶ್ನಿಸಿದ್ದರು. ಸಂಬರಗಿ ಆರೋಪದ ಹಿನ್ನೆಲೆಯಲ್ಲಿ ಜಮೀರ್‌ ಅಹಮದ್‌ ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ನೀಡಿದ್ದರು.

 

 

ಈ ದೂರಿನಂತೆ ಐಪಿಸಿ ಸೆಕ್ಷನ್ 120 ಬಿ(ಕ್ರಿಮಿನಲ್‌ ಪಿತೂರಿ), 504 (ಉದ್ದೇಶಪೂರ್ವಕ ತೇಜೋವಧೆ), 463 (ಫೋರ್ಜರಿ) , 465 (ಫೋರ್ಜರಿ ಬಗ್ಗೆ ಶಿಕ್ಷೆಯ ಪ್ರಮಾಣ) 506 (ಬೆದರಿಕೆ ಒಡ್ಡುವುದು) ಅಡಿಯಲ್ಲಿ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿತ್ತು?
‘ನನ್ನ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಪ್ರಶಾಂತ್ ಸಂಬರಗಿ ಅವರು ಗೌರವಕ್ಕೆ ಚ್ಯುತಿ ತರುತ್ತಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆರೋಪಿಸಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು.

‘ಸುಖಾಸುಮ್ಮನೇ ಹೇಳಿಕೆ ನೀಡಿ ಅಪಪ್ರಚಾರ ಮಾಡುತ್ತಿರುವ ಹಾಗೂ ಸಂಬಂಧವಿಲ್ಲದ ವಿಷಯದಲ್ಲಿ ನನ್ನ ಹೆಸರು ಎಳೆದು ತರುತ್ತಿರುವ ಸಂಬರಗಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದೂ ಜಮೀರ್ ಅವರು ಒತ್ತಾಯಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top