ಕೊಲಂಬೊ ಕ್ಯಾಸಿನೋಗೆ ನಾನು ಹೋಗಿದ್ದೇನೆ, ನನ್ನ ಜೊತೆಗೆ ಎಚ್ ಡಿ ಕುಮಾರಸ್ವಾಮಿ ಸಹ ಬಂದಿದ್ದರು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡುತ್ತಿದ್ದಂತೆ ಅತ್ತ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ HDK ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೋಗೆ ಹೋಗುವುದಾಗಿ ಬಹಿರಂಗವಾಗಿ ಹೇಳಿಯೇ ಹೋಗಿದ್ದೆವಲ್ಲಾ!? ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ.
1/6— H D Kumaraswamy (@hd_kumaraswamy) September 12, 2020
ಈ ಸಂಬಂಧ ಟ್ವೀಟ್ ಮಾಡಿರುವ ಅವರು ” ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ‘ಕೊಲಂಬೋ ಯಾತ್ರೆ’ ಮಾಡಿರಲಿಲ್ಲ.” ಎಂದು ಹೇಳಿದ್ದಾರೆ.
ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ.
2/6— H D Kumaraswamy (@hd_kumaraswamy) September 12, 2020
“ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ. 2014ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ.”
2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೇ, ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ.
3/6— H D Kumaraswamy (@hd_kumaraswamy) September 12, 2020
“ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಸ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ. ”
ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ.
4/6— H D Kumaraswamy (@hd_kumaraswamy) September 12, 2020
“ಆಚಾರವಿಲ್ಲದ ನಾಲಿಗೆ ನಿನ್ನ, ನೀಚ ಬುದ್ಧಿಯ ಬಿಡು ನಾಲಿಗೆ, ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ, ಚಾಚಿ ಕೊಂಡಿರುವಂತ ನಾಲಿಗೆ, ಸತತವು ನುಡಿ ಕಂಡ್ಯ ನಾಲಿಗೆ, ಚಾಡಿ ಹೇಳಲು ಬೇಡ ನಾಲಿಗೆ ಪುರಂದರ ದಾಸರು. ” ಎಂದು ಕುಮಾರಸ್ವಾಮಿ ಹೇಳಿದ್ದಾರೆ
ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ.
5/6— H D Kumaraswamy (@hd_kumaraswamy) September 12, 2020
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
