fbpx
ಸಮಾಚಾರ

“ವಾಚ್‍ಮ್ಯಾನ್ ಆಗ್ಲಿಲ್ಲ, ಇನ್ನೂ ಆಸ್ತಿ ಬರ್ದು ಕೊಡ್ತೀರಾ?” ರಾಮದಾಸ್ ವ್ಯಂಗ್ಯ

ಡ್ರಗ್ ಪ್ರಕರಣದಲ್ಲಿ ಜಮೀರ್ ಅವರು ಕೊಲಂಬೋಗೆ ಹೋಗಿ ಬಂದಿದ್ದಾರೆ ಎಂಬ ಆರೋಪ ಬಂದಿದೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್ ಅವರು, ಆರೋಪ ಸಾಬೀತಾದರೆ ನಾನು ನನ್ನೆಲ್ಲ ಆಸ್ತಿಯನ್ನು ಸರ್ಕಾರಕ್ಕೆ ಬರೆದು ಕೊಡುತ್ತೇನೆ ಎಂದು ಹೇಳಿದ್ದರು.

ಈ ಹೇಳಿಕೆಗೆ ಟಾಂಗ್ ನೀಡಿ ಟ್ವೀಟ್ ಮಾಡಿರುವ ರಾಮದಾಸ್, “ಯಡಿಯೂರಪ್ಪನವರು ಮುಖ್ಯಮಂತ್ರಿ ಆದರೆ ಅವರ ಮನೆ ಮುಂದೆ ನಾನು ವಾಚ್‍ಮ್ಯಾನ್ ಆಗುತ್ತೇನೆ ಎಂದು ಹೇಳಿ ವರ್ಷಗಳು ಉರುಳಿದವು. ಇನ್ನೂ ಅದರ ಕುರುಹು ಕಾಣುತ್ತಿಲ್ಲ. ಇನ್ನು ಸಂಜನಾ ಜೊತೆ ಕೊಲಂಬೋ ಹೋಗಿದ್ದು ಸಾಬೀತಾದರೆ ನೀವು ನಿಜಕ್ಕೂ ಆಸ್ತಿ ಬರೆದುಕೊಡುತ್ತೀರೆ ಜಮೀರ್” ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

 

 

ಕಳೆದ ವಿಧಾನಸಭೆ ಚುನವಾಣೆ ವೇಳೆ ಬಿಜೆಪಿ ಪಕ್ಷ ಗೆದ್ದು ಯಡಿಯೂರಪ್ಪನವರು ಮುಖ್ಯಮಂತ್ರಿಯಾದರೆ, ನಾನು ಒಂದು ದಿನ ವಾಚ್‍ಮ್ಯಾನ್ ಡ್ರೆಸ್ ಹಾಕಿಕೊಂಡು ಅವರ ಮನೆಯ ಬಳಿ ವಾಚ್‍ಮ್ಯಾನ್ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು. ಈ ಅಂಶವನ್ನು ಇಟ್ಟುಕೊಂಡು ರಾಮದಾಸ್ ಈ ರೀತಿ ಟ್ವೀಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top