fbpx
ಸಮಾಚಾರ

ಮೊದಲ ದಿನವೇ ಸಂಸತ್ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ 17 ಸಂಸದರಿಗೆ ಕೊರೋನಾ ಪಾಸಿಟಿವ್!

ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಮಹಾಮಾರಿ ವಕ್ಕರಿಸಿರುವುದು ದೃಢವಾಗಿದೆ.

ಸೆಪ್ಟೆಂಬರ್ 13ರಂದು ಸಂಸದರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ 17 ಸಂಸದರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಬಿಜೆಪಿಯ 12 ಸಂಸದರು, ವೈಎಸ್ಆರ್ ಕಾಂಗ್ರೆಸ್ ನ 2, ಶಿವಸೇನೆ, ಡಿಎಂಕೆ ಮತ್ತು ಆರ್ಎಲ್ಪಿ ಪಕ್ಷದ ತಲಾ ಒಬ್ಬ ಸಂಸದರಿಗೆ ಕೊರೋನಾ ದೃಢಪಟ್ಟಿದೆ.

ಎಎನ್ ಐ ಈ ಬಗ್ಗೆ ವರದಿ ಮಾಡಿದ್ದು, ಮೀನಾಕ್ಷಿ ಲೇಖಿ, ಅನಂತ್ ಕುಮಾರ್ ಹೆಗಡೆ, ಪ್ರವೇಶ್ ಸಾಹೇಬ್ ಸಿಂಗ್ ಸೇರಿದಂತೆ 17 ಮಂದಿ ಸಂಸದರಿಗೆ ಕೋವಿಡ್ ಸೋಂಕು ದೃಢವಾಗಿದೆ ಎಂದು ತಿಳಿಸಿದೆ.

ಅಂದಹಾಗೆ ಕೊರೊನಾ, ಆರ್ಥಿಕತೆ ಕುಸಿತ ಸೇರಿದಂತೆ ದೇಶದ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚಿಸಲು ಮುಂಗಾರು ಸಂಸತ್ ಅಧಿವೇಶನ ಆರಂಭಿಸುವಂತೆ ವಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಒತ್ತಾಯ ಮೇರೆಗೆ ಕೊರೊನಾ ಸಂಕಷ್ಟದ ನಡುವೆ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಎಚ್ಚರಿಕೆಯ ನಡುವೆ ಇಂದಿನಿಂದ ಸಂಸತ್ ಕಲಾಪ ಆರಂಭವಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top