fbpx
ಸಮಾಚಾರ

ಡ್ರ*ಗ್ಸ್ ದಂಧೆ ಆರೋಪ : ನಟ ದಿಗಂತ್‌, ನಟಿ ಐಂದ್ರಿತಾಗೆ ಸಿಸಿಬಿ ನೋಟಿಸ್‌

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್‌ ದಂಪತಿ ದಿಗಂತ್‌, ಐಂದ್ರಿತಾ ರೇಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಎದುರಿಸಬೇಕೆಂದು ಸೂಚಿಸಿಲಾಗಿದೆ.

‘ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ಅವರಿಗೆ ನೋಟಿಸ್ ನೀಡಲಾಗಿದೆ. ಅವರು ಬಂದ ನಂತರ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು‌

ಎರಡು ದಿನಗಳ ಹಿಂದೆ ನಟಿ ಐಂದ್ರಿತಾ ರೇಯವರು ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದ ವಿಡಿಯೋ, ಫೋಟೋ ವೈರಲ್‌ ಆಗಿತ್ತು. ಈ ವೇಳೆ ಈ ಪ್ರಕರಣದ ಆರೋಪಿ ಶೇಖ್‌ ಫಾಝಿಲ್‌ ಜೊತೆ ಇದ್ದ ಫೋಟೋಗಳು ಸಹ ಸಿಕ್ಕಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಐಂದ್ರಿತಾ ರೇ, ನಾನು ಸಿನಿಮಾ ಪ್ರಮೋಶನ್ ಗಾಗಿ ಕೊಲಂಬೋದಲ್ಲಿರುವ ಕ್ಯಾಸಿನೋಗೆ ಹೋಗಿದ್ದೆ. ಚಿತ್ರ ಪ್ರಚಾರಕ್ಕಾಗಿ ನಮ್ಮ ಮ್ಯಾನೇಜರ್ ಹೋಗಬೇಕು ಅಂತ ಹೇಳಿದ್ದರಿಂದ ಸೊಹೈಲ್ ಮತ್ತು ಅರ್ಬಾಜ್ ಖಾನ್ ಜೊತೆ ಹೋಗಿದ್ದೇನೆ. ಶೇಖ್ ಫಾಝಿಲ್ ನನಗೆ ವೈಯಕ್ತಿಯ ಪರಿಚಯವಿಲ್ಲ ಎಂದು ತಿಳಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top