fbpx
ಸಮಾಚಾರ

‘ಅ’ ತೆಗೆದು ‘ಮಾ’ ಉಳಿಸುವ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರ: ಹಿಂದಿ ಹೇರಿಕೆ ವಿರುದ್ಧ ರಿಷಬ್ ಶೆಟ್ಟಿ ಆಕ್ರೋಶ

ಹಿಂದಿ ದಿವಸ್ ಆಚರಣೆಗೆ ಹಾಗೂ ಹಿಂದಿ ಭಾಷಾ ಹೇರಿಕೆಗೆ ಕರ್ನಾಟದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾ ನಟರು ಹಾಗೂ ನಿರ್ದೇಶಕರು ಸೇರಿದಂತೆ ಅನೇಕರು ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ನಿರ್ದೇಶಕ ರಿಷಬ್ ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ.

 

 

‘ಆ ದಿನಗಳು’ ಖ್ಯಾತಿಯ ಚೇತನ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಪ್ರಕಾಶ್ ರಾಜ್, ಧನಂಜಯ್, ಕವಿರಾಜ್, ರಿಷಬ್ ಶೆಟ್ಟಿ ಸೇರಿದಂತೆ ಹಲವರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟಿಸಿ ಟ್ವೀಟ್ ಮಾಡಿದ್ದಾರೆ. ಇದೀಗ ನಟ ರಿಷಬ್ ಶೆಟ್ಟಿ ಹಿಂದಿ ಭಾಷಾ ಹೇರಿಕೆಯ ಬಗ್ಗೆ ಟ್ವೀಟ್ ಮಾಡುವ ವಿರೋಧ ವ್ಯಕ್ತಪಡಿಸಿದ್ದಾರೆ.

“ಸುಲಿದಿಟ್ಟ ರಸಬಾಳೆಯಷ್ಟು ಸುಲಲಿತವಾದ ಭಾಷೆ ನಮ್ಮದಿರುವಾಗ, ಇನ್ನೊಂದು ಭಾಷೆಯ ಅಗತ್ಯವಾದರೂ ಏನು? ಎಂದು ಪ್ರಶ್ನೆ ಮಾಡಿದ್ದಾರೆ. ನಾವು ಕನಸು ಕಾಣೋ ಭಾಷೆ, ನಮ್ಮ ನಾಲಿಗೆಯಲಾಡಲು ಬಿಡಿ. ಓಲೈಸುವ ನೆಪದಿ ನಮ್ಮ ಕಂದಮ್ಮಗಳಾಡೋ ‘ಅಮ್ಮ’ ಪದದಿಂದ ‘ಅ’ ತೆಗೆದು ‘ಮಾ’ ಉಳಿಸುವ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ” ಎಂದು ರಿಷಬ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top