fbpx
ಸಮಾಚಾರ

ರಾಗಿಣಿ ನಂತರ ಇದೀಗ ಸಂಜನಾ ಕೂಡ ಜೈಲುಪಾಲು

ಡ್ರಗ್ಸ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ ರಾಗಿಣಿ ಬೆನ್ನಲ್ಲೇ ಈಗ ನಟಿ ಸಂಜನಾ ಜೈಲುಪಾಲಾಗಿದ್ದಾರೆ. ಈ ಮೂಲಕ ಡ್ರಗ್ಸ್‌ ಪ್ರಕರಣದಲ್ಲಿ ಜೈಲು ಸೇರಿದ ಎರಡನೇ ನಟಿ ಎಂಬ ಕುಖ್ಯಾತಿಗೆ ಸಂಜನಾ ಪಾತ್ರವಾಗಿದ್ದಾರೆ.

ಡ್ರಗ್ಸ್ ಕೇಸ್​ನಲ್ಲಿ ಸಂಜನಾ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸೆ.8ರ ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಸಂಜನಾ ಮನೆ ಮೇಲೆ ದಾಳಿ ನಡೆಸಿದ್ದರು. ಅಂದಿನಿಂದ ಸಿಸಿಬಿ ಕಸ್ಟಡಿಯಲ್ಲಿದ್ದ ಸಂಜನಾರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಬುಧವಾರ ಸಂಜೆ 4ರ ಸುಮಾರಿನಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಧೀಶರು ನಟಿ ಸಂಜನಾಗೆ 2 ದಿನ ಅಂದರೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಸೋಮವಾರ ನಟಿ ರಾಗಿಣಿಗೆ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಈ ವೇಳೆ ಸಿಸಿಬಿ ಪೊಲೀಸರು ಸಂಜನಾರನ್ನು 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಕೇಳಿದ್ದರು. ಆದರೆ ಕೋರ್ಟ್‌ 2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿತ್ತು.

ರಾಗಿಣಿ ಸೇರಿದಂತೆ ಸೇರಿದಂತೆ ಆರೋಪಿಗಳ ವಿರುದ್ಧ ನಾರ್ಕೊಟಿಕ್‌ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್‌ಸ್ಟೆನ್ಸಸ್ (ಎನ್‍ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್‌ ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top