fbpx
ಸಮಾಚಾರ

BREAKING: ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ – ಅಕುಲ್ ಬಾಲಾಜಿಗೆ ಸಿಸಿಬಿ ನೋಟಿಸ್

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆ ನಂಟಿನ ಪ್ರಕರಣದಲ್ಲಿ ಹಲವರ ನಂಟಿನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದ್ದು, ಇಂದು ಮತ್ತೆ ಮೂವರಿಗೆ ಸಿಸಿಬಿ ನೋಟಿಸ್​ ನೀಡಿದೆ. ನಟ, ಖ್ಯಾತ ನಿರೂಪಕ ಅಕುಲ್ ಬಾಲಾಜಿ, ಯುವರಾಜ್ ಆರ್.ವಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್‍ಗೆ ನೋಟಿಸ್ ನೀಡಲಾಗಿದೆ.

ಮಾಜಿ ಶಾಸಕ ಆರ್.ವಿ ದೇವರಾಜ್ ಮಗನಾಗಿರುವ ಯುವರಾಜ್ ಆರ್. ವಿ ಸುದಾಮನಗರದ ಕಾರ್ಪೋರೇಟರ್. ಈ ಹಿಂದೆ ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿಯೂ ಯುವರಾಜ್ ಹೆಸರು ಕೇಳಿ ಬಂದಿತ್ತು. ಹೀಗಾಗಿ ಅಂದು ಸಿಸಿಬಿ ಪೊಲೀಸರು ಯುವರಾಜ್ ಬಳಿ ಹೇಳಿಕೆ ಪಡೆದು ವಾಪಸ್ ಕಳುಹಿಸಿದ್ದರು.

ನಾಳೆ ಬೆಳಗ್ಗೆ ಹಾಜರಾಗ್ತೀನಿ:
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಖಾಸಗಿ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್​ವುಡ್ ನಟ, ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟಿಸ್ ‌ಬಂದಿದೆ. ನಾನು ಈಗ ಹೈದರಾಬಾದ್​ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗ್ತೀನಿ ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top