fbpx
ಸಮಾಚಾರ

“ನಾನು ಮಸ್ಲಿಂ ಧರ್ಮದಿಂದ ಬಹಳಷ್ಟು ಪ್ರಭಾವಿತಳಾಗಿದ್ದೇನೆ” ನಟಿ ಸಂಜನಾ ಮಾತು

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಮತಾಂತರ ಆಗಿದ್ದರೇ ಎಂಬ ಪ್ರಶ್ನೆ ಎದ್ದಿದೆ. ಡ್ರಗ್ಸ್ ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಸಂಜನಾ ವಿರುದ್ಧ ಕಿಡಿ ಕಾರುತ್ತಲೇ ಇರುವ, ಆರೋಪಗಳನ್ನು ಮಾಡುತ್ತಲೇ ಇರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ, ಸಂಜನಾ ಬಗ್ಗೆ ಹೊಸದೊಂದು ಮಾಹಿತಿ ಹರಿಬಿಟ್ಟಿದ್ದಾರೆ.

‘ಸಂಜನಾ ಗಲ್ರಾನೀ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿವೆ’! ಹೀಗೆ ನೇರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ ಪ್ರಶಾಂತ್‌ ಸಂಬರಗಿ.

 

 

ಈ ಮತಾಂತರ ಸುದ್ದಿಗೆ ಪುಷ್ಠಿ ಎಂಬಂತೆ ಸಂಜನಾ ಸಿನಿಮಾ ಶೂಟಿಂಗ್ ಗೆ ಬುರ್ಖಾ ಧರಿಸಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆ ಧರ್ಮವನ್ನು ಹೊಗಳಿರುವುದು ಬೆಳಕಿಗೆ ಬಂದಿದೆ. ನಾನು ಮುಸ್ಲಿಂ ಧರ್ಮ ಹಾಗು ಸಂಪ್ರದಾಯದಿಂದ ಸಾಕಷ್ಟು ಪ್ರಭಾವಿತಳಾಗಿದ್ದೇನೆ ಎಂದು ಜುಲೈ 7, 2014ರಲ್ಲಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಸಂಜನಾರ ಪೋಸ್ಟ್ ಇದೀಗ ಬೆಳಕಿಗೆ ಬಂದಿದೆ.

ಹೌದು, ಅಂದು ಬ್ಲಾಕ್ ಆಂಡ್ ವೈಟ್ ಫೋಟೋ ಪೋಸ್ಟ್ ಮಾಡಿದ್ದ ಸಂಜನಾ, ಇಸ್ಲಾಂ ಧರ್ಮದ ಬಗ್ಗೆ ಅತೀವ ಒಲವು ತೋರಿರುವ ಸಂಜನಾ, ಇಸ್ಲಾಂ ಸಂಸ್ಕೃತಿ, ಸಂಪ್ರದಾಯದ ಬಗ್ಗೆ ಪ್ರಭಾವಿತಳಾಗಿದ್ದೇನೆ. ಅಲ್ಲದೆ ಧರ್ಮದ ಬಗ್ಗೆ ಆಕರ್ಷಿತಳಾಗಿದ್ದೇನೆ ಎಂದು ಬರೆದುಕೊಳ್ಳುವ ಮೂಲಕ ಮುಸ್ಲಿಂ ಧರ್ಮವನ್ನು ಹೊಗಳಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ನಟಿ 2014ರಲ್ಲೇ ಮತಾಂತರಕ್ಕೆ ಮನಸ್ಸು ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ.

ಇತ್ತೀಚೆಗೆ ನಟಿ ಸಂಜನಾ ಗಲ್ರಾನಿ ಅವರಿಗೆ ಸಂಬಂಧಿಸಿದ ಒಂದು ಫೋಟೋ ವೈರಲ್‌ ಆಗಿತ್ತು. ಅದು ಅವರ ಮದುವೆ ಫೋಟೋ ಇರಬಹುದು ಎಂಬ ಮಾತುಗಳು ಕೇಳಿಬಂದಿದ್ದವು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top